ಲಂಚ ಪಡೆಯುವಾಗ ಎಸಿಬಿ ಬಲೆಗೆ ಬಿದ್ದ ಗುಡಸ ಗ್ರಾ.ಪಂ. ಕ್ಲರ್ಕ್ 

ಲಂಚ ಪಡೆಯುವಾಗ ಎಸಿಬಿ ಬಲೆಗೆ ಬಿದ್ದ ಗುಡಸ ಗ್ರಾ.ಪಂ. ಕ್ಲರ್ಕ್ 

ಬೆಳಗಾವಿ: ಹುಕ್ಕೇರಿ ತಾಲೂಕು ಗುಡಸ ಗ್ರಾಮ ಪಂಚಾಯತಿ ಕ್ಲರ್ಕ್ ಲಂಚ‌ ಪಡೆಯುವಾಗ ಭ್ರಷ್ಟಾಚಾರ ನಿರ್ಮೂಲನಾ ದಳ (ಎಸಿಬಿ)ದ ಬಲೆಗೆ ಬಿದ್ದಿದ್ದಾನೆ.


ಪಂಚಾಯತಿಯ ಕ್ಲರ್ಕ್ ಹಾಗೂ ಬಿಲ್ ಕಲೆಕ್ಟರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಸಿದಗೌಡ ಬಸವಣ್ಣಿ ನೇರ್ಲಿ ರೂ.7,400 ಲಂಚ ಪಡೆಯುವಾಗ ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದಾನೆ.


ಆಪಾದಿತನು ಆಸ್ತಿ ರಿಜಿಸ್ಟರ್ ನಲ್ಲಿ ಅರ್ಜಿದಾರರೊಬ್ಬರ ವಾರಸಾ ಹೆಸರು ದಾಖಲಿಸಲು ರೂ.7,400 ಲಂಚಕ್ಕೆ ಬೇಡಿಕೆ ಇಟ್ಟಿದ್ದನು. ಈ ಕುರಿತಂತೆ ಅರ್ಜಿದಾರ ಭೀಮಪ್ಪ ಕಲಕುಟಗಿ ಎಸಿಬಿಗೆ ದೂರು ಸಲ್ಲಿಸಿದ್ದರು. ಆರೋಪಿಯನ್ನು ವಶಕ್ಕೆ ಪಡೆದಿರುವ ಅಧಿಕಾರಿಗಳು ಮುಂದಿನ ತನಿಖೆ ಕೈಗೊಂಡಿದ್ದಾರೆ.


ಎಸಿಬಿ ಎಸ್ಪಿ ಬಿ. ಎಸ್.ನ್ಯಾಮಗೌಡರ ಮಾರ್ಗದರ್ಶನದಲ್ಲಿ, ಡಿವೈಎಸ್ಪಿ ಕರುಣಾಕರ ಶೆಟ್ಟಿ ನೇತೃತ್ವದಲ್ಲಿ ಇನ್ಸಪೆಕ್ಟರ್ ಗಳಾದ ಅಡಿವೇಶ ಗುದಿಗೊಪ್ಪ ಹಾಗೂ ಸುನಿಲಕುಮಾರ ಮತ್ತು ಸಿಬ್ಬಂದಿ ದಾಳಿ‌ ನಡೆಸಿದರು.