ನ.8 ರಿಂದ ಅಂಗನವಾಡಿ ಆರಂಭ; ಮಕ್ಕಳಿಗೆ ಉಪಾಹಾರ ಮನೆಗಳಿಗೆ ಕಳಿಸಿಕೊಡಲು ವ್ಯವಸ್ಥೆ  

ನ.8 ರಿಂದ ಅಂಗನವಾಡಿ ಆರಂಭ; ಮಕ್ಕಳಿಗೆ ಉಪಾಹಾರ ಮನೆಗಳಿಗೆ ಕಳಿಸಿಕೊಡಲು ವ್ಯವಸ್ಥೆ   

 

 

ಬೆಳಗಾವಿ: ಇದೇ ನ.8 ರಿಂದ ಅಂಗನವಾಡಿಗಳನ್ನು ಬೆಳಿಗ್ಗೆ 10 ರಿಂದ 12 ಗಂಟೆಯವರೆಗೆ ಪ್ರಾರಂಭಿಸಲಾಗುತ್ತಿದೆ. ಉಪಾಹಾರವನ್ನು ಮನೆಗೆ ನೀಡಲು ವ್ಯವಸ್ಥೆ ಮಾಡಿಕೊಳ್ಳಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಇಲಾಖೆಯ ಉಪ ನಿರ್ದೇಶಕ ಬಸವರಾಜ ವರವಟ್ಟಿ ತಿಳಿಸಿದರು.

 

 

ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಎಲ್.ಕೆ.ಅತೀಕ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಅಂಗನವಾಡಿಗಳಲ್ಲಿ ಮಕ್ಕಳಿಗೆ ನೀಡಲಾಗುತ್ತಿರುವ ಆಹಾರದ ಗುಣಮಟ್ಟದ ಬಗ್ಗೆ ಖಾತ್ರಿಪಡಿಸಿಕೊಳ್ಳಬೇಕು. ಸಂಬಂಧಿಸಿದ ಅಧಿಕಾರಿಗಳು ಕಡ್ಡಾಯವಾಗಿ ಆಹಾರದ ಗುಣಮಟ್ಟವನ್ನು ಪರಿಶೀಲಿಸಬೇಕು ಎಂದು ನಿರ್ದೇಶನ ನೀಡಿದರು.

 

 

ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿರ್ಶನ ಮಾತನಾಡಿ, ಸರಕಾರದ ಮಾರ್ಗಸೂಚಿ ಪ್ರಕಾರ‌ ಶಾಲಾ ಆವರಣದಲ್ಲಿ ಅಂಗನವಾಡಿ ಕೇಂದ್ರಗಳ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುತ್ತಿದೆ. ನಿವೇಶನ ಲಭ್ಯವಿರುವ ಕಡೆಗಳಲ್ಲಿ ಅಂಗನವಾಡಿ ಕೇಂದ್ರಗಳನ್ನು ನಿರ್ಮಿಸಬೇಕು. ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ನಾಗರಿಕ ಸೌಲಭ್ಯ ನಿವೇಶನ(ಸಿಎ ಸೈಟ್) ನೀಡಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

 

 ಅಂಗನವಾಡಿ ಕೇಂದ್ರಗಳಿಗೆ ನಿವೇಶನ, ನಿರ್ಮಾಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ವಿವಿಧ ಇಲಾಖೆಯ ಸಮನ್ವಯತೆ ಸಾಧಿಸಿ ಜಿಲ್ಲಾಧಿಕಾರಿಗಳ ಮೂಲಕ ಅಗತ್ಯ ಕ್ರಮಕೈಗೊಳ್ಳಬೇಕು ಎಂದರು.

ಶಾಲಾ ಆವರಣದಲ್ಲಿ ಅಂಗನವಾಡಿ ಕೇಂದ್ರ ನಿರ್ಮಾಣಕ್ಕೆ ಮೊದಲ ಆದ್ಯತೆ ನೀಡಬೇಕು.ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಸರಿಪಡಿಸಿಕೊಳ್ಳಬೇಕು. ತಾಲ್ಲೂಕು ಮಟ್ಟದ ಅಧಿಕಾರಿಗಳು ತಮ್ಮ ಹಂತದಲ್ಲಿ ಸಭೆ ನಡೆಸಿ ಆಸ್ತಿಗೆ ಸಂಬಂಧಿಸಿದ ಎಲ್ಲ ದಾಖಲೆಗಳನ್ನು ಸರಿಪಡಿಸಬೇಕು ಎಂದು ಉಪ ನಿರ್ದೇಶಕರಗಳಿಗೆ ಸೂಚನೆ ನೀಡಿದರು.

 

 ಉಪ ವಿಭಾಗಾಧಿಕಾರಿಗಳಾದ ರವೀಂದ್ರ ಕರಲಿಂಗಣ್ಣವರ, ಶಶಿಧರ್ ‌ಬಗಲಿ, ಬುಡಾ ಆಯುಕ್ತ ಪ್ರೀತಂ ನಸಲಾಪುರೆ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಈಶ್ವರ ಉಳ್ಳಾಗಡ್ಡಿ ಮತ್ತಿತರರು ಸಭೆಯಲ್ಲಿ ಉಪಸ್ಥಿತರಿದ್ದರು.