ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಅಧ್ಯಕ್ಷರಾಗಿ ಅರ್ಜುನ ನಾಯಿಕವಾಡಿ ನೇಮಕ  

ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಅಧ್ಯಕ್ಷರಾಗಿ ಅರ್ಜುನ ನಾಯಿಕವಾಡಿ ನೇಮಕ   

 

ಬೆಳಗಾವಿ: ರಾಯಬಾಗ ತಾಲೂಕಿನ ನಿಷ್ಠಾವಂತ ಕಾಂಗ್ರೆಸ್ ಕಾರ್ಯಕರ್ತ ಅರ್ಜುನ ತಮ್ಮಣ್ಣ ನಾಯಿಕವಾಡಿ ಅವರನ್ನು ಚಿಕ್ಕೋಡಿ ಜಿಲ್ಲಾ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷರನ್ನಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ನೇಮಿಸಿದೆ. ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮಣರಾವ ಚಿಂಗಳೆ ಅವರು, ಭಾನುವಾರದಂದು ಪಕ್ಷದ ಕಾರ್ಯಾಲಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅರ್ಜುನ ನಾಯಿಕವಾಡಿ ಅವರಿಗೆ ನೇಮಕಾತಿಯ ಆದೇಶ ಪತ್ರ ನೀಡಿ ಸನ್ಮಾನಿಸಿದರು.

 

ಅರ್ಜುನ ನಾಯಿಕವಾಡಿ ಅವರ ಧರ್ಮಪತ್ನಿ ತೇಜಸ್ವಿನಿ ನಾಯಿಕವಾಡಿ ಅವರು ಕಳೆದ ಜೂನ್ ತಿಂಗಳಲ್ಲಿ ಆಕಸ್ಮಿಕ ಮರಣಕ್ಕೆ ತುತ್ತಾಗಿದ್ದರು. ದಿ.ತೇಜಸ್ವಿನಿ ಅವರು ಬೆಳಗಾವಿ ಜಿಲ್ಲಾ ಪಂಚಾಯತಿ ಉಪಾಧ್ಯಕ್ಷರಾಗಿ, ಚಿಕ್ಕೋಡಿ ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷರಾಗಿ ಹಾಗೂ ಪಕ್ಷದ ವಿವಿಧ ಹುದ್ದೆಗಳಲ್ಲಿ ನಿಷ್ಠೆಯಿಂದ ಸೇವೆ ಸಲ್ಲಿಸಿದ್ದರು. ಕಾಂಗ್ರೆಸ್ ಪಕ್ಷಕ್ಕೆ ಶಕ್ತಿಯಾಗಿ, ಸಂಘಟನೆಯನ್ನು ಬಲಪಡಿಸಲು ತಮ್ಮದೇ ಆದ ಕೊಡುಗೆ ನೀಡಿದ್ದರು.

 

“ನನ್ನ ಪತ್ನಿಯ ಹುಟ್ಟುಹಬ್ಬದ ದಿನದಂದೇ ಕಾಂಗ್ರೆಸ್ ಪಕ್ಷವು ನನಗೆ ಹೊಸ ಜವಾಬ್ದಾರಿಯನ್ನು ನೀಡುತ್ತಿದ್ದು, ಪತ್ನಿಯಂತೆಯೇ ತಾನೂ ಕೂಡ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಬಲಪಡಿಸಲು ಎಲ್ಲ ರೀತಿಯ ಪ್ರಯತ್ನ ಮಾಡುತ್ತೇನೆ” ಎಂದು ಅರ್ಜುನ ನಾಯಿಕವಾಡಿ ಇದೇ ಸಂದರ್ಭದಲ್ಲಿ ಹೇಳಿದರು.

 

ಅರ್ಜುನ ನಾಯಿಕವಾಡಿ ಅವರು ಪತ್ನಿ ತೇಜಸ್ವಿನಿ ಅವರ ಸ್ಮೃತಿಯಲ್ಲಿ, ಸ್ವಗ್ರಾಮವಾದ ರಾಯಬಾಗ ತಾಲೂಕಿನ ಕಂಕಣವಾಡಿಯಲ್ಲಿ ದೇವಸ್ಥಾನ ನಿರ್ಮಾಣ ಮಾಡಲು ತೀರ್ಮಾನಿಸಿದ್ದು, ದಿ.ತೇಜಸ್ವಿನಿ ಅವರ ಹುಟ್ಟು ಹಬ್ಬದ ಪ್ರಯುಕ್ತ ಭಾನುವಾರ 52 ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ ಆಯೋಜಿಸಿದ್ದರು. ಚಿಕ್ಕೋಡಿ ತಾಲೂಕು ಆಸ್ಪತ್ರೆಯಲ್ಲಿನ ರೋಗಿಗಳಿಗೆ ಹಣ್ಣು ಹಂಪಲ ವಿತರಿಸುವುದು ಸೇರಿದಂತೆ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು.