ನಾಳೆ ಹೊರಬೀಳಲಿರುವ ಸಾಮಾನ್ಯ ಪ್ರವೇಶ ಪರೀಕ್ಷೆ (KCET)ಯ ಫಲಿತಾಂಶಕ್ಕಾಗಿ ‌ಈ ಲಿಂಕ್ ಬಳಸಿ

ನಾಳೆ ಹೊರಬೀಳಲಿರುವ ಸಾಮಾನ್ಯ ಪ್ರವೇಶ ಪರೀಕ್ಷೆ (KCET)ಯ ಫಲಿತಾಂಶಕ್ಕಾಗಿ ‌ಈ ಲಿಂಕ್ ಬಳಸಿ

 

ಬೆಂಗಳೂರು : ಸಾಮಾನ್ಯ ಪ್ರವೇಶ ಪರೀಕ್ಷೆ ( Karnataka common entrance test)ಯ ಫಲಿತಾಂಶ ನಾಳೆ ಹೊರಬೀಳಲಿದೆ. ಇಲಾಖೆಯ ಅಧಿಕೃತ ವೆಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟವಾಗಲಿದ್ದು, ಫಲಿತಾಂಶಕ್ಕಾಗಿ ಈ ಕೆಳಗಿನ ಲಿಂಕ್‌ ಬಳಸಿ.

 
 
 
ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಸಿಇಟಿ ಫಲಿತಾಂಶದ ಕುರಿತು ಮಾಹಿತಿ ನೀಡಿದ್ದಾರೆ. ಅಗಸ್ಟ್‌ 28, 29 ಮತ್ತು 30ರಂದು ಸಾಮಾನ್ಯ ಪ್ರವೇಶ ಪರೀಕ್ಷೆ ನಡೆದಿತ್ತು. ಪರೀಕ್ಷಾ ಪ್ರಾಧಿಕಾರದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಪರಿಶ್ರಮದಿಂದ ಅತ್ಯಂತ ಕಡಿಮೆ ಅವಧಿಯಲ್ಲಿ ಫಲಿತಾಂಶ ಪ್ರಕಟವಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
 
 
 
 ಸಪ್ಟೆಂಬರ್‌ 20 ರಂದು ಸಂಜೆ 4 ಗಂಟೆಗೆ ಫಲಿತಾಂಶ ಪ್ರಕಟವಾಗಲಿದ್ದು, ವಿದ್ಯಾರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್‌ https://cetonline.karnataka.gov.in/kea/ ಮೂಲಕ ಫಲಿತಾಂಶ ವೀಕ್ಷಣೆ ಮಾಡಬಹುದಾಗಿದೆ. ಈ ಬಾರಿ ಕೊರೊನಾ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ವೃತ್ತಿಪರ ಪ್ರವೇಶಕ್ಕೆ ಸಿಇಟಿ ಅಂಕಗಳನ್ನು ಮಾತ್ರವೇ ಪರಿಗಣಿಸಲಾಗುತ್ತಿದೆ. ಹೀಗಾಗಿ ಈ ಬಾರಿಯ ಸಿಇಟಿ ಫಲಿತಾಂಶ ಹೆಚ್ಚು ಮಹತ್ವವನ್ನು ಪಡೆದುಕೊಂಡಿದೆ.