ಅಕ್ಟೋಬರ್ 3 ರಂದು ಪೊಲೀಸ್ ‌ಸಬ್ - ಇನ್ಸಪೆಕ್ಟರ್ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ

ಅಕ್ಟೋಬರ್ 3 ರಂದು ಪೊಲೀಸ್ ‌ಸಬ್ - ಇನ್ಸಪೆಕ್ಟರ್ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ
ಬೆಳಗಾವಿ:  ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಸಬ್-ಇನ್ಸ್‌ಪೆಕ್ಟರ್‌(ಸಿವಿಲ್) (ಪುರುಷ & ಮಹಿಳಾ) (ಎನ್‌ಕೆಕೆ ಕೆಕೆ ) ಹಾಗೂ ಸೇವಾನಿರತರನ್ನೊಳಗೊಂಡ 545 ಹುದ್ದೆಗಳಿಗೆ ಇಟಿ/ಪಿಎಸ್‌ಸಿ ಪರೀಕ್ಷೆಗಳಲ್ಲಿ ಅರ್ಹರಾದ ಅಭ್ಯರ್ಥಿಗಳಿಗೆ ಅಕ್ಟೋಬರ್ 3 ರಂದು ಬೆಂಗಳೂರು, ಮೈಸೂರು ಮಂಗಳೂರು, ಹುಬ್ಬಳ್ಳಿ-ಧಾರವಾಡ, ಕಲಬುರಗಿ ನಗರ, ದಾವಣಗೆರೆ ಜಿಲ್ಲೆ ಮತ್ತು ತುಮಕೂರು ಪರೀಕ್ಷಾ ಕೇಂದ್ರಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುವುದು.
 
ಮೊದಲ ಪತ್ರಿಕೆಯ ಕಾಲಾವಧಿ  ಬೆಳಗ್ಗೆ 11 ರಿಂದ 12:30 ಗಂಟೆಯವರೆಗೆ ಮತ್ತು ಎರಡನೇ ಪತ್ರಿಕೆಯನ್ನು ಮಧ್ಯಾಹ್ನ 3 ರಿಂದ 4:30 ರವರೆಗೆ ಇರಲಿದೆ.  ಅಭ್ಯರ್ಥಿಗಳು ಪರೀಕ್ಷೆಯ ಕರೆ ಪತ್ರವನ್ನು ಇಲಾಖೆಯ ಅಧಿಕೃತ ವೆಬ್‌ಸೈಟ್ WWW.recruitment.ksp.gov.in
ನಿಂದ ಡೌನ್‌ಲೋಡ್ ಮಾಡಿಕೊಂಡು ಪರೀಕ್ಷೆಗೆ ಹಾಜರಾಗಬೇಕೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.