ಪಾಲಿಕೆ ಚುನಾವಣೆ: ನಾಳೆ ಸಂಜೆವರೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

ಪಾಲಿಕೆ ಚುನಾವಣೆ: ನಾಳೆ ಸಂಜೆವರೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

 

ಬೆಳಗಾವಿ: ಮಹಾನಗರ ಪಾಲಿಕೆ ಚುನಾವಣೆಗೆ ಸಂಬಂಧಪಟ್ಟಂತೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ನಾಳೆ ಸಂಜೆಯೊಳಗಾಗಿ ಬಿಡುಗಡೆ ಮಾಡಲಾಗುವುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ತಿಳಿಸಿದ್ದಾರೆ. ಈ ಮೂಲಕ ಕಾಂಗ್ರೆಸ್ ನಿಂದ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಕ್ಕೆ ಸಂಬಂಧಪಟ್ಟಂತೆ ಇದುವರೆಗೆ ಇದ್ದ ಎಲ್ಲ ಊಹಾಪೋಹಗಳಿಗೆ ಅವರು ಅಧಿಕೃತವಾಗಿ ತೆರೆ ಎಳೆದಿದ್ದಾರೆ.

 

ಇಂದು ಮುಂಜಾನೆ ಗೋಕಾಕನಲ್ಲಿ ಮಾತನಾಡಿದ ಅವರು, ಮಹಾನಗರ ಪಾಲಿಕೆಯ ಚುನಾವಣೆಯನ್ನು ಕಾಂಗ್ರೆಸ್ ಪಕ್ಷದ ಚಿಹ್ನೆಯ ಮೇಲೆಯೇ ನಡೆಸುವುದರ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ. ಪಕ್ಷದ ಅಭ್ಯರ್ಥಿಗಳ ಪಟ್ಟಿಯನ್ನು ನಾಳೆಯೇ ಬಿಡುಗಡೆ ಮಾಡುವುದಾಗಿ ಅವರು ಹೇಳಿದರು.

 

ಎಂ.ಬಿ.ಪಾಟೀಲ, ಎಲ್.ಹನುಮಂತಯ್ಯ ಹಾಗೂ ನಾಸೀರ ಹುಸೇನ್ ನೇತೃತ್ವದಲ್ಲಿ ಇತ್ತೀಚಿಗೆ ಹಾಲಿ ಹಾಗೂ ಮಾಜಿ ಶಾಸಕರು ಮತ್ತು ಸ್ಥಳೀಯ ಮುಖಂಡರ ಜೊತೆ ಚರ್ಚಿಸಿ, ಬಳಿಕ ಅವರ ಅಭಿಪ್ರಾಯ ಸಂಗ್ರಹಿಸಿ ಪಕ್ಷದ ವರಿಷ್ಠರಿಗೆ ಕಳಿಸಲಾಗಿತ್ತು. ನಾಯಕರ ಅಭಿಪ್ರಾಯ ಪರಿಗಣಿಸಿರುವ ವರಿಷ್ಠರು ಪಕ್ಷದ ಚಿಹ್ನೆಯ ಮೇಲೆಯೇ ಚುನಾವಣೆ ಎದುರಿಸಲು ನಿರ್ಣಯ ಕೈಗೊಂಡಿದ್ದಾರೆ ಎಂದು ಸತೀಶ ಜಾರಕಿಹೊಳಿ ಹೇಳಿದರು.