ಮಹಾನಗರ ಪಾಲಿಕೆ ಚುನಾವಣೆ: ಅಧಿಸೂಚನೆ ಪ್ರಕಟ

ಮಹಾನಗರ ಪಾಲಿಕೆ ಚುನಾವಣೆ: ಅಧಿಸೂಚನೆ ಪ್ರಕಟ

ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆಯ ಸಾರ್ವತ್ರಿಕ ಚುನಾವಣೆಗೆ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಸೋಮವಾರ (ಆ.16) ಅಧಿಸೂಚನೆ ಪ್ರಕಟಿಸಿದ್ದಾರೆ.

ನಾಮಪತ್ರ ಸಲ್ಲಿಕೆಗೆ ಆಗಸ್ಟ್ 23 ಕಡೆಯ ದಿನವಾಗಿರುತ್ತದೆ. ಆ.24 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಆ.26 ನಾಮಪತ್ರ ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿರುತ್ತದೆ.
ಸೆಪ್ಟೆಂಬರ್ 3 ರಂದು ಮತದಾನ ಹಾಗೂ ಅಗತ್ಯಬಿದ್ದರೆ ಸೆ. 5 ರಂದು ನಡೆಸಲಾಗುತ್ತದೆ.

ಸೆಪ್ಟೆಂಬರ್ 6 ರಂದು ಮಯ ಎಣಿಕೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಅಧಿಸೂಚನೆಯಲ್ಲಿ ತಿಳಿಸಿದ್ದಾರೆ.