ಮೊರಾರ್ಜಿ ದೇಸಾಯಿ ಸೇರಿದಂತೆ ವಿವಿಧ ವಸತಿ ಶಾಲೆಗಳಿಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ಮೊರಾರ್ಜಿ ದೇಸಾಯಿ ಸೇರಿದಂತೆ ವಿವಿಧ ವಸತಿ ಶಾಲೆಗಳಿಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

 

ಮೊರಾರ್ಜಿ ದೇಸಾಯಿ, ರಾಣಿ ಚನ್ನಮ್ಮ, ವಾಜಪೇಯಿ, ಏಕಲವ್ಯ, ಡಾ.ಅಂಬೇಡ್ಕರ್ ಹಾಗೂ ಇಂದಿರಾ ಗಾಂಧಿ ಸೇರಿದಂತೆ ಕರ್ನಾಟಕದ ವಿವಿಧ ವಸತಿ ಶಿಕ್ಷಣ ಶಾಲೆಗಳ 2021-22ನೇ ಶೈಕ್ಷಣಿಕ ಸಾಲಿಗೆ ಸಂಬಂಧಿಸಿದಂತೆ 6ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸುವ ಅವಧಿಯನ್ನು ಇದೀಗ ವಿಸ್ತರಿಸಲಾಗಿದೆ.

5ನೇ ತರಗತಿ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳು ಸಂಬಂಧಪಟ್ಟ ವಸತಿ ಶಾಲೆಗಳಿಗೆ ಪ್ರವೇಶ ಪಡೆಯಲು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಆಗಷ್ಟ 10ರ ವರೆಗೆ ಇದ್ದ ಅವಧಿಯನ್ನು ಅಗಷ್ಟ 16 ರ ವರೆಗೆ ವಿಸ್ತರಿಸಿ ಸರ್ಕಾರದ ಅಂಗಸಂಸ್ಥೆಯಾದ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಕಾರ್ಯನಿರ್ವಾಹಕ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ.

ತಾಂತ್ರಿಕ ಕಾರಣಗಳಿಂದ ಸರ್ವರ್ ಡೌನ್ ಇದ್ದ ಕಾರಣಕ್ಕೆ ಅವಧಿಯನ್ನು ವಿಸ್ತರಿಸಬೇಕೆಂದು ವಸತಿ ಶಾಲೆಗಳ ಪ್ರಾಂಶುಪಾಲರು ಮನವಿ ಮಾಡಿಕೊಂಡಿದ್ದರು.