ಡಾ:ಬಿ.ಆರ್. ಅಂಬೇಡ್ಕರ್ ಅಭಿವೃಧ್ಧಿ ನಿಗಮದದಿಂದ ವಿವಿಧ ಸಾಲ ಯೋಜನೆಗಳಡಿ  ಅರ್ಜಿ ಆಹ್ವಾನ

ಡಾ:ಬಿ.ಆರ್. ಅಂಬೇಡ್ಕರ್ ಅಭಿವೃಧ್ಧಿ ನಿಗಮದದಿಂದ ವಿವಿಧ ಸಾಲ ಯೋಜನೆಗಳಡಿ  ಅರ್ಜಿ ಆಹ್ವಾನ

ಬೆಳಗಾವಿ:  ಡಾ:ಬಿ.ಆರ್. ಅಂಬೇಡ್ಕರ್ ಅಭಿವೃಧ್ಧಿ ನಿಗಮದ ಮತ್ತು ಅಲೆಮಾರಿ ಅರೆಅಲೆಮಾರಿ, ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಸಮುದಾಯಗಳ ಅಭಿವೃದ್ಧಿ ಕೋಶದಿಂದ ವತಿಯಿಂದ 2021-22ನೇ ಸಾಲಿಗೆ ಈ ಕೆಳಕಂಡ ಯೋಜನೆಗಳಡಿ ಸಾಲ ಸೌಲಭ್ಯ ಒದಗಿಸಲು 18 ರಿಂದ 60 ವರ್ಷದೊಳಗಿನ ಅರ್ಹ ಪರಿಶಿಷ್ಟ ಜಾತಿಯ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾಸಲಾಗಿದೆ.

ಯೋಜನೆಗಳು : ನೇರ ಸಾಲ ಯೋಜನೆ, ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ (ಐ.ಎಸ್.ಬಿ), ಮೈಕ್ರೋ ಕ್ರೆಡಿಟ್ ಯೋಜನೆ (ಸ್ವ ಸಹಾಯ ಗುಂಪುಗಳಿಗೆ), ಗಂಗಾ ಕಲ್ಯಾಣ ಯೋಜನೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

 ನಿಗಮದ ವೆಬ್‍ಸೈಟ್:www.adcl.karnataka.gov.in  ರಲ್ಲಿ ಮೇಲ್ಕಂಡ ಯೋಜನೆಗಳಡಿ ಆನ್ ಲೈನ್ ಅರ್ಜಿಗಳನ್ನು ಅಹ್ವಾನಿಸಲಾಗಿದ್ದು, ಈ ಹಿಂದೆ ನಿಗಮದ ಯಾವುದೇ ಯೋಜನೆಗಳಡಿ ಸಾಲ ಸೌಲಭ್ಯ ಪಡೆದಿರುವ ಫಲಾನುಭವಿಗಳು ಅಥವಾ ಅವರ ಕುಟುಂಬದ ಸದಸ್ಯರು ಮತ್ತೊಮ್ಮೆ ಸೌಲಭ್ಯ ಪಡೆಯಲು ಅರ್ಹರಿರುವುದಿಲ್ಲ. ಆದ್ದರಿಂದ ಅವರು ಮತ್ತೊಮ್ಮೆ ಅರ್ಜಿ ಸಲ್ಲಿಸಲು ಅವಕಾಶ ವಿರುವುದಿಲ್ಲ. ಅದೇ ರೀತಿ ಈ ಹಿಂದೆ ಅರ್ಜಿ ಸಲ್ಲಿಸಿ ಸವಲತ್ತು ಪಡೆಯದೇ ಇರುವ ಅರ್ಜಿದಾರರು ಪುನಃ ಹೊಸದಾಗಿ ಅರ್ಜಿಯನ್ನು ಸಲ್ಲಿಸಬಹುದು.

 ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‍ಸೈಟ್‍ಕ್ಕೆ ಭೇಟಿ ನೀಡಿ ಮಾಹಿತಿಯನ್ನು  ಪಡೆಯಬಹುದು. ಅರ್ಜಿ ಸಲ್ಲಿಸಲು ಸಪ್ಟೆಂಬರ್ 02 ಕೊನೆಯ ದಿನವಾಗಿದ್ದು, ಅರ್ಜಿ ಪ್ರತಿ ಹಾಗೂ ಸ್ವೀಕೃತಿಯನ್ನು ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಡಾ:ಬಿ.ಆರ್. ಅಂಬೇಡ್ಕರ್ ಅಭಿವೃಧ್ಧಿ ನಿಗಮದ ಮತ್ತು ಅಲೆಮಾರಿ ಅರೆಅಲೆಮಾರಿ, ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಸಮುದಾಯಗಳ ಅಭಿವೃದ್ಧಿ ಕೋಶ ಬೆಳಗಾವಿ, ರೂಮ್ ನಂ:123 1ನೇ ಮಹಡಿ ಸುವರ್ಣ ವಿಧಾನಸೌಧ ಹಲಗಾ, ಬೆಳಗಾವಿ-20 ವಿಳಾಸದಲ್ಲಿ ಸಲ್ಲಿಸಲು ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.