ಸರ್ಕಾರದಿಂದ ಸ್ತ್ರೀ ಶಕ್ತಿ ಸ್ವ-ಸಹಾಯ ಗುಂಪುಗಳಿಗೆ ರೂ.1 ಲಕ್ಷ ಧನಸಹಾಯದ ಘೋಷಣೆ

ಸರ್ಕಾರದಿಂದ ಸ್ತ್ರೀ ಶಕ್ತಿ ಸ್ವ-ಸಹಾಯ ಗುಂಪುಗಳಿಗೆ ರೂ.1 ಲಕ್ಷ ಧನಸಹಾಯದ ಘೋಷಣೆ
ಬೆಳಗಾವಿ : 75 ನೇ ಸ್ವಾತಂತ್ರ್ಯ ದಿನದ ಪ್ರಯುಕ್ತ ಮುಖ್ಯ ಮಂತ್ರಿಗಳು ಘೋಷಣೆ ಮಾಡಿರುವ ಅಮೃತ ಸ್ವ-ಸಹಾಯ ಕಿರು ಉದ್ಯಮಗಳ ಯೋಜನೆಯಡಿ ಆದಾಯೋತ್ಪನ್ನ ಚಟುವಟಿಕೆಗಳನ್ನು ನಡೆಸುತ್ತಿರುವ, ಸ್ತ್ರೀಶಕ್ತಿ ಸ್ವ-ಸಹಾಯ ಗುಂಪುಗಳಿಗೆ ತಲಾ ರೂ.1.00 ಲಕ್ಷದಂತೆ, ಬೀಜ ಧನವನ್ನು ನೀಡುವ ಯೋಜನೆಯನ್ನು ಕರ್ನಾಟಕ ಸರ್ಕಾರ ಜಾರಿಗೆ ತಂದಿದೆ.
ಈ ಯೋಜನೆಯ ಸೌಲಭ್ಯವನ್ನು ಅರ್ಹ ಸ್ತ್ರೀಶಕ್ತಿ ಸ್ವ-ಸಹಾಯ ಗುಂಪುಗಳು ಪಡೆದುಕೊಳ್ಳಲು ಮತ್ತು ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾ ಕಛೇರಿಗಳನ್ನು
ಸಂಪರ್ಕಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.