ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ 1,242 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ ಸರ್ಕಾರ ಅಧಿಸೂಚನೆ

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ 1,242 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ ಸರ್ಕಾರ ಅಧಿಸೂಚನೆ

 

 

ಬೆಳಗಾವಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳನ್ನು ಭರ್ತಿ ಮಾಡುವ ಸಂಬಂಧ, 2,015 ನೇ ಸಾಲಿನ ಸಹಾಯಕ ಪ್ರಾಧ್ಯಾಪಕರ ನೇಮಕಾತಿಯಲ್ಲಿ ಅರ್ಹ ಅಭ್ಯರ್ಥಿಗಳು ಲಭ್ಯವಿಲ್ಲದೆ ಭರ್ತಿಯಾಗದಿರುವ 145 ಹುದ್ದೆಗಳನ್ನು ಒಳಗೊಂಡಂತೆ, ಪ್ರಸ್ತುತ ಭರ್ತಿ ಮಾಡಬೇಕಾಗಿರುವ 1,097 ಹುದ್ದೆಗಳು ಸೇರಿ ಒಟ್ಟು 1,242 ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಉನ್ನತ ಶಿಕ್ಷಣ ಇಲಾಖೆ (ಕಾಲೇಜು ಶಿಕ್ಷಣ) ಅಧಿಸೂಚನೆಯನ್ನು ಹೊರಡಿಸಿದೆ.

 

 

ಹುದ್ದೆಗಳನ್ನು ಭರ್ತಿ ಮಾಡಲು ವಿಶೇಷ ನೇಮಕಾತಿ ನಿಯಮಗಳನ್ವಯ ಭರ್ತಿ ಮಾಡುವ ಸಲುವಾಗಿ ಆಯ್ಕೆ ಪ್ರಕ್ರಿಯೆಯನ್ನು ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರವನ್ನು ಆಯ್ಕೆ ಪ್ರಾಧಿಕಾರವನ್ನಾಗಿ ಮಾಡಿ ಅಧಿಸೂಚನೆ ಹೊರಡಿಸಲಾಗಿದೆ. ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಯುಜಿಸಿ ವೇತನ ಶ್ರೇಣಿ ರೂ.57,700 – 1,87,400 ಯಲ್ಲಿ ನೇರ ನೇಮಕಾತಿ ಮೂಲಕ ಆಯ್ಕೆ ಮಾಡಿಕೊಳ್ಳಲು ಈ ಕೆಳಕಂಡಂತೆ ವಿಷಯವಾರು ಮತ್ತು ವೃಂದವಾರು ವಿವರ ಈ ಕೆಳಗಿನಂತಿದೆ.