ಬೆಳಗಾವಿಯಲ್ಲಿ ತಾತ್ಕಾಲಿಕ ಅರೆಕಾಲಿಕ ಅತಿಥಿ ಉಪನ್ಯಾಸಕರ ನೇಮಕ: ಸೆ.24 ರಂದು ಸಂದರ್ಶನ

ಬೆಳಗಾವಿಯಲ್ಲಿ ತಾತ್ಕಾಲಿಕ ಅರೆಕಾಲಿಕ ಅತಿಥಿ ಉಪನ್ಯಾಸಕರ ನೇಮಕ: ಸೆ.24 ರಂದು ಸಂದರ್ಶನ

 

ಬೆಳಗಾವಿ : ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಯ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಉಪನ್ಯಾಸಕರ ಹುದ್ದೆಗಳಿಗೆ ತಾತ್ಕಾಲಿಕವಾಗಿ ಅರೆಕಾಲಿಕ ಅತಿಥಿ ಉಪನ್ಯಾಸಕರನ್ನು ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಅಹ್ವಾನಿಸಲಾಗಿತ್ತು.

 

 

          ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳು ನಗರದ ಚೆನ್ನಮ್ಮ ವೃತ್ತದಲ್ಲಿರುವ ಸರ್ಕಾರಿ ಪಾಲಿಟೆಕ್ನಿಕ್ ನ  ಪ್ರಾಚಾರ್ಯರ ಕೊಠಡಿಯಲ್ಲಿ ಶುಕ್ರವಾರ (ಸೆ.24) ರಂದು ಮುಂಜಾನೆ 11 ಗಂಟೆಗೆ ತಮ್ಮ ಎಲ್ಲ ಮೂಲ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬೇಕು.

 

 

          ಸದರಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಖುದ್ದಾಗಿ ಅಂಚೆ ಮೂಲಕ ಮಾಹಿತಿ ರವಾನಿಸಲಾಗಿದೆ. ನಿಗದಿತ ದಿನಾಂಕದಂದು ಸಂದರ್ಶನಕ್ಕೆ ಗೈರು ಹಾಜರಾದರೆ ಅಂತಹವರನ್ನು ನೇಮಕಾತಿಗೆ ಪರಿಗಣಿಸಲಾಗುವುದಿಲ್ಲ.

 

 

          ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ದೂರವಾಣಿ ಸಂಖ್ಯೆ : 0831-2951386 ಹಾಗೂ ಪ್ರಾಚಾರ್ಯರ ದೂರವಾಣಿ ಸಂಖ್ಯೆ : 9481130811 ಹಾಗೂ ಇ-ಮೇಲ್: 113gpt@gmail.com ಕ್ಕೆ ಸಂಪರ್ಕಿಸಬಹುದು ಎಂದು ಸರ್ಕಾರಿ ಪಾಲಿಟೆಕ್ನಿಕ್‍ನ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.