ಬೆಳಗಾವಿ: ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ಅವರು ಸೋಮವಾರ ಬೆಳಿಗ್ಗೆ 10 ಗಂಟೆಗೆ ಸುವರ್ಣ ವಿಧಾನ ಸೌಧದಲ್ಲಿ ರಾಜ್ಯ ಮಟ್ಟದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಸಮ್ಮೇಳನ ಮತ್ತು ಗ್ರಾಮ ಪಂಚಾಯತ್ ಆರೋಗ್ಯ ಅಮೃತ ಯೋಜನೆಗೆ ಚಾಲನೆ ನೀಡಲಿದ್ದಾರೆ.
ಕಾರ್ಯಕ್ರಮದ ಸಂಪೂರ್ಣ ವಿವರ.
• ದಿನಾಂಕ:30-08-2021 ಹಾಗೂ 31-08-2021ರಂದು ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಸಮ್ಮೇಳನ ನಡೆಯಲಿದೆ.
• ಮೊದಲನೆ ದಿನ ಬೆಳಿಗ್ಗೆ 10.00 ಗಂಟೆಗೆ ಸಮ್ಮೇಳನ ಹಾಗೂ “ಗ್ರಾಮ ಪಂಚಾಯತ್ ಆರೋಗ್ಯ ಅಮೃತ ಅಭಿಯಾನ”ಕ್ಕೆ ಚಾಲನೆ ನೀಡಲಾಗುವುದು.
• ಸಮ್ಮೇಳನದ ಮೊದಲನೆ ದಿನ ಸ್ವಚ್ಛ ಭಾರತ್ ಮಿಷನ್, ಜಲಜೀವನ್ ಮಿಷನ್, ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳು ಹಾಗೂ ಮಹಾತ್ಮಗಾಂಧಿ ನರೇಗಾ ಯೋಜನೆಯ ಪ್ರಗತಿ ಪರಿಶೀಲನೆ ನಡೆಸಲಾಗುವುದು.
• ಸಮ್ಮೇಳನದ ಎರಡನೇ ದಿನ ಗ್ರಾಮ ಪಂಚಾಯತ್ ಅನುದಾನ ಹಂಚಿಕೆ ಪುಸ್ತಕ ಹಾಗೂ “ಮಾತುಕತೆ” ಮಾಸಿಕ ಪತ್ರಿಕೆಗಳನ್ನು ಬಿಡುಗಡೆ ಮಾಡಲಾಗುತ್ತದೆ.
• ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವ ಸಂದರ್ಭದಲ್ಲಿ ಮಾನ್ಯ ಮುಖ್ಯ ಮಂತ್ರಿಗಳು ಘೋಷಣೆ ಮಾಡಿರುವ “ಅಮೃತ ಗ್ರಾಮ ಪಂಚಾಯತಿ ಯೋಜನೆ” ಅನುಷ್ಠಾನಕ್ಕೆ ಚಾಲನೆ ನೀಡಲಾಗುವುದು.
• ದೂರದೃಷ್ಠಿ ಯೋಜನೆ ತಯಾರಿಕೆ, ಸಾಮಥ್ರ್ಯ ಸೌಧಗಳ ಬಲವರ್ಧನೆ, ಬಾಪೂಜಿ ಸೇವಾ ಕೇಂದ್ರಗಳ ಸುಧಾರಣೆ, ಗ್ರಾಮ ಪಂಚಾಯತಿಗಳ ಸಂಪನ್ಮೂಲ ಕ್ರೋಢೀಕರಣ ಮತ್ತು ಗ್ರಾಮ ಪಂಚಾಯತಿ ಮಟ್ಟದಲ್ಲಿ ಕ್ರೀಡೆ ಹಾಗೂ ಸಾಂಸ್ಕøತಿಕ ಚಟುವಟಿಕೆಗಳಿಗೆ ಉತ್ತೇಜನ ನೀಡುವ ಕುರಿತು ಸಮಾಲೋಚನೆ ನಡೆಸಲಾಗುವುದು.
• ಸಮ್ಮೇಳನವು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರ ಅಧ್ಯಕ್ಷತೆಯಲ್ಲಿ ನಡೆಯಲಿದ್ದು, ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು (ಪಂಚಾಯತ್ ರಾಜ್), ಗ್ರಾಮೀಣಾಭಿವೃದ್ಧಿ ಆಯುಕ್ತಾಲಯ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಹಾಗೂ ಪಂಚಾಯತ್ ರಾಜ್ ಆಯುಕ್ತಾಲಯದ ಆಯುಕ್ತರುಗಳು, ಎಲ್ಲಾ ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಇಲಾಖೆಯ ವಿವಿಧ ವಿಭಾಗಗಳ ಮುಖ್ಯಸ್ಥರು ಭಾಗವಹಿಸಲಿದ್ದಾರೆ.
• ಮಹಾತ್ಮಗಾಂಧಿ ನರೇಗಾ ಯೋಜನೆಯಡಿ 2021-22ನೇ ಸಾಲಿಗೆ 13 ಕೋಟಿ ಮಾನವ ದಿನಗಳ ಉದ್ಯೋಗ ಸೃಜನೆ ಮಾಡುವ ಗುರಿ ನೀಡಲಾಗಿದ್ದು, ಇಲ್ಲಿಯವರೆಗೆ 8.91 ಕೋಟಿ ಮಾನವ ದಿನಗಳ ಸೃಜನೆ ಮಾಡುವ ಮೂಲಕ ಶೇ.68.57ರಷ್ಟು ಸಾಧನೆ ಮಾಡಲಾಗಿದೆ.
• ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ “ಜಲಶಕ್ತಿ ಅಭಿಯಾನ”ದಲ್ಲಿ ಕರ್ನಾಟಕ ರಾಜ್ಯವು ಒಟ್ಟು 5.60 ಲಕ್ಷ ಕಾಮಗಾರಿಗಳನ್ನು ಕೈಗೆತ್ತಿಕೊಂಡಿದ್ದು, 2.69 ಲಕ್ಷ ಕಾಮಗಾರಿಗಳನ್ನು ಪೂರ್ಣಗೊಳಿಸುವ ಮೂಲಕ ದೇಶದಲ್ಲಿಯೇ ಮೊದಲ ಸ್ಥಾನ ಪಡೆದಿದೆ.