ರಾಜ್ಯ ಸರ್ಕಾರದಿಂದ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮ ಘೋಷಣೆ

0 5

ಬೆಳಗಾವಿ: ಎರಡು ದಿನಗಳ ಹಿಂದಷ್ಟೇ ಮರಾಠಾ ಅಭಿವೃದ್ಧಿ ಪ್ರಾಧಿಕಾರ ರಚಿಸಿ ಘೋಷಣೆ ಮಾಡಿದ್ದ ರಾಜ್ಯ ಸರ್ಕಾರ, ಇಂದು ಕರ್ನಾಟಕ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆಗೆ ಆದೇಶ ಹೊರಡಿಸಿದೆ.

ಮರಾಠಾ ಅಭಿವೃದ್ಧಿ ಪ್ರಾಧಿಕಾರ ರಚಿಸಿ ಅದಕ್ಕೆ ರೂ.50 ಕೋಟಿ ಮೀಸಲಿಟ್ಟ ಸರ್ಕಾರದ ನಿರ್ಣಯ ರಾಜ್ಯದ ತುಂಬ ಟೀಕೆಗೆ ಒಳಗಾಗಿತ್ತು. ಇದಾದ ಬಳಿಕ ಬಸವರಾಜ ಹೊರಟ್ಟಿ ಮತ್ತು ಎಂ.ಬಿ.ಪಾಟೀಲ ಸೇರಿದಂತೆ ಹಲವಾರು ಲಿಂಗಾಯತ ಮುಖಂಡರು ಸಮುದಾಯವನ್ನು 2ಎ ಗೆ ಸೇರಿಸಬೇಕೆಂದು ಒತ್ತಾಯಿಸಿದ್ದರು.

ಲಿಂಗಾಯತ ಮುಖಂಡರ ಒತ್ತಡದ ಬೆನ್ನಲ್ಲೇ ಇಂದು ಮುಂಜಾನೆ ರಾಜ್ಯ ಸರ್ಕಾರವು ಕರ್ನಾಟಕ ವೀರಶೈವ ಅಭಿವೃದ್ಧಿ ನಿಗಮ ಸ್ಥಾಪನೆಗೆ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ವೀರಶೈವ-ಲಿಂಗಾಯತ ಸಮಾಜ ಅತಿ ಹೆಚ್ಚಿನ ಸಂಖ್ಯೆಯಲ್ಲಿದ್ದು, ಇದರಲ್ಲಿ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಅತ್ಯಂತ ಹಿಂದುಳಿದವರಿದ್ದಾರೆ. ಹೀಗಾಗಿ ಸಮುದಾಯದ ಸರ್ವತೋಮುಖ ಅಭಿವೃದ್ಧಿಗಾಗಿ ನಿಗಮದ ಅವಶ್ಯಕತೆ ಇದೆ ಎಂದು ಸರ್ಕಾರ ಆದೇಶದಲ್ಲಿ ಹೇಳಿದೆ.


Leave a comment