ಮುಂದಿನ ವಾರ ಬೆಳಗಾವಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ

0 12

ಬೆಳಗಾವಿ: ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಮುಂದಿನ ವಾರ ಬೆಳಗಾವಿ ನಗರಕ್ಕೆ ಭೇಟಿ ನೀಡಲಿದ್ದಾರೆಂದು ಪಕ್ಷದ ಮೂಲಗಳು ತಿಳಿಸಿವೆ. ನಡ್ಡಾ ಅವರು ಮುಂದಿನ ವಾರ ದಕ್ಷಿಣ ರಾಜ್ಯಗಳ ಪ್ರವಾಸ ಕೈಗೊಂಡಿದ್ದು, ಆ ಸಂದರ್ಭದಲ್ಲಿ ಬೆಳಗಾವಿಗೂ ಭೇಟಿ ನೀಡಿ ಮುಖಂಡರ ಸಭೆ ನಡೆಸಲಿದ್ದಾರೆ.

ಸಿಎಂ ಬಿ.ಎಸ್.ಯಡಿಯೂರಪ್ಪ ಸಂಪುಟ ವಿಸ್ತರಣೆಗೆ ಸಂಬಂಧಪಟ್ಟಂತೆ ನಿನ್ನೆ ನಡ್ಡಾ ಅವರನ್ನು ನವದೆಹಲಿಯಲ್ಲಿ ಭೇಟಿ ಮಾಡಿದ್ದರು. ಆದರೆ, ಸದ್ಯಕ್ಕೆ ಸಂಪುಟ ವಿಸ್ತರಣೆಗೆ ಆಗಲಿ ಅಥವಾ ಪುನಾರಚನೆಗೆ ನಡ್ಡಾ ಅನುಮತಿ ನೀಡಿಲ್ಲ. ಇದು ಯಡಿಯೂರಪ್ಪನವರಿಗೆ ಮುಜುಗರ ತಂದಿದೆ.

ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಬಗ್ಗೆ ಚರ್ಚೆಗಳು ಆರಂಭಗೊಂಡಿರುವಾಗ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಈ ಭೇಟಿ ಮಹತ್ವ ಪಡೆದುಕೊಂಡಿದೆ.


Leave a comment