ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (TET)ಯ ಫಲಿತಾಂಶ ಪ್ರಕಟ

ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (TET)ಯ ಫಲಿತಾಂಶ ಪ್ರಕಟ

 

ಬೆಳಗಾವಿ: ಸಾರ್ವಜನಿಕ ಶಿಕ್ಷಣ ಇಲಾಖೆಯ ಕೇಂದ್ರೀಕೃತ ದಾಖಲಾತಿ ಘಟಕದಿಂದ ಆಗಷ್ಟ್ 22 ರಂದು ನಡೆಸಲಾಗಿದ್ದ ೨೦೨೧ರ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (TET)ಯ ಫಲಿತಾಂಶ ಇದೀಗ ಪ್ರಕಟಗೊಂಡಿದೆ. ಅಭ್ಯರ್ಥಿಗಳು ಇಲಾಖೆಯ ವೆಬಸೈಟ್ – https://sts.karnataka.gov.in/TET/ ಭೇಟಿ ನೀಡಿ ತಮ್ಮ ಫಲಿತಾಂಶವನ್ನು ಗಮನಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

  

 

ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ನಡೆಸಲಾಗಿದ್ದ ಟಿಇಟಿ ಪರೀಕ್ಷೆಗೆ ಒಟ್ಟು 2,31,886 ಅಭ್ಯರ್ಥಿಗಳು ಹಾಜರಾಗಿದ್ದರು. ಅಭ್ಯರ್ಥಿಗಳು ವೆಬಸೈಟ್ ನಲ್ಲಿ ನೀಡಲಾದ ಲಿಂಕ್ ಮೂಲಕ ಸುರಕ್ಷತಾ ಕೋಡ್ (QR CODE) ಹೊಂದಿರುವ ಗಣಕೀಕೃತ ಪ್ರಮಾಣಪತ್ರದ ಪ್ರತಿಯನ್ನು ಪಡೆಯಬಹುದಾಗಿದೆ.

 

 

ಸಾರ್ವಜನಿಕ ಶಿಕ್ಷಣ ಇಲಾಖೆ ನೀಡಿರುವ ಪ್ರಕಟಣೆಯ ಪ್ರತಿ ಇಲ್ಲಿದೆ: