23 ರಿಂದ ಶಾಲೆ ಆರಂಭ, ಆದರೆ  ಎಲ್ಲ ಕಡೆ ಅಲ್ಲ: ಮುಖ್ಯಮಂತ್ರಿ ಬೊಮ್ಮಾಯಿ

23 ರಿಂದ ಶಾಲೆ ಆರಂಭ, ಆದರೆ  ಎಲ್ಲ ಕಡೆ ಅಲ್ಲ: ಮುಖ್ಯಮಂತ್ರಿ ಬೊಮ್ಮಾಯಿ

ಬೆಂಗಳೂರು:  ರಾಜ್ಯದ ಶಿಕ್ಷಣ ಸಂಸ್ಥೆಗಳಲ್ಲಿ ಆಗಸ್ಟ್ 23ರಿಂದ ಒಂಬತ್ತನೆ ತರಗತಿಯಿಂದ ದ್ವಿತೀಯ ಪಿಯುಸಿವರೆಗಿನ ವಿದ್ಯಾರ್ಥಿಗಳಿಗೆ ಭೌತಿಕ ತರಗತಿ ಆರಂಭಿಸುವ ನಿರ್ಧಾರದಲ್ಲಿ ಬದಲಾವಣೆ ಇಲ್ಲ. ಆದರೆ, ಸೋಂಕು ಕಡಿಮೆ ಇರುವ ಜಿಲ್ಲೆಗಳಲ್ಲಿ ಮಾತ್ರವೇ ತರಗತಿ ಆರಂಭಿಸಲು ಅನುಮತಿ  ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.


ಬೆಂಗಳೂರಿನಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ಶನಿವಾರ  ಉನ್ನತ ಮಟ್ಟದ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ,  ಕೋವಿಡ್ ಸೋಂಕು ಪ್ರಮಾಣ ದರ ಶೇಕಡ‌ 2ಕ್ಕಿಂತ ಕಡಿಮೆ ಇದ್ದರೆ ಮಾತ್ರ ಶಾಲೆ, ಕಾಲೇಜು ತೆರೆಯಲು ಅನುಮತಿ ನೀಡಲಾಗುವುದು. ಅಂತಹ  ಜಿಲ್ಲೆಗಳಲ್ಲಿ ಮಾತ್ರ ಒಂಬತ್ತನೇ ತರಗತಿಯಿಂದ ದ್ವಿತೀಯ ಪಿಯುಸಿವರೆಗೆ ಭೌತಿಕ ತರಗತಿ ಆರಂಭಿಸಲಾಗುವುದು ಎಂದು ತಿಳಿಸಿದರು.


ಇನ್ನು ಶಿಕ್ಷಕರು ಮತ್ತು ಪೋಷಕರು ಕಡ್ಡಾಯವಾಗಿ ಲಸಿಕೆ ಪಡೆದಿರಬೇಕು. ಶಾಲೆ, ಕಾಲೇಜುಗಳಲ್ಲಿ ಸೋಂಕು ಪತ್ತೆಯಾದರೆ ಶಾಲೆಗಳನ್ನು  ಬಂದ್ ಮಾಡಿ ಎಲ್ಲ ಮುಂಜಾಗ್ರತೆ ಕ್ರಮ ಕೈಗೊಳ್ಳಲು ಹಾಗೂ ಗಡಿ ಜಿಲ್ಲೆಗಳಲ್ಲಿ ಹೆಚ್ಚು ನಿಗಾ ವಹಿಸಲು ಸೂಚಿಸಲಾಗಿದೆ ಎಂದರು.