ಬಸ್ ಪಾಸ್: ಸೇವಾಸಿಂಧು ಆನ್ ಲೈನ್ ಪೋರ್ಟಲ್ ನಲ್ಲಿ ಅರ್ಜಿ ಸ್ವೀಕಾರ

ಬಸ್ ಪಾಸ್: ಸೇವಾಸಿಂಧು ಆನ್ ಲೈನ್ ಪೋರ್ಟಲ್ ನಲ್ಲಿ ಅರ್ಜಿ ಸ್ವೀಕಾರ
ಬೆಳಗಾವಿ:   2021-22ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿಗಳು ಸೇವಾಸಿಂಧು ಆನಲೈನ್ ಪೋರ್ಟಲ್ ಮುಖಾಂತರ ಅರ್ಜಿ ಸಲ್ಲಿಸಿ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯಾಪ್ತಿಯಲ್ಲಿ ಹುಬ್ಬಳ್ಳಿ, ಧಾರವಾಡ, ಗದಗ, ಬಾಗಲಕೋಟ, ಉತ್ತರ ಕನ್ನಡ (ಶಿರಸಿ), ಹಾವೇರಿ, ಚಿಕ್ಕೋಡಿ ಮತ್ತು ಬೆಳಗಾವಿ, ವಿಭಾಗಗಳ ಘಟಕಗಳ ವ್ಯಾಪ್ತಿಯ  ಬಸ್ ನಿಲ್ದಾಣಗಳ ಪಾಸ್ ಕೌಂಟರ್‌ಗಳಲ್ಲಿ ದಿನಾಂಕ: 01.09.2021 ರಿಂದ ಬಸ್ ಪಾಸ್ ಪಡೆಯಲು ಅವಕಾಶ ಕಲ್ಪಿಸಲಾಗಿದೆ.
ಆದ್ದರಿಂದ ವಿದ್ಯಾರ್ಥಿಗಳು ಸೇವಾಸಿಂದು ಆನಲೈನ್ ಪೋರ್ಟಲ್ ಮುಖಾಂತರ ಅರ್ಜಿ ಸಲ್ಲಿಸಿ ಸಂಸ್ಥೆಯ  ವಿದ್ಯಾರ್ಥಿ ರಿಯಾಯಿತಿ ಪಾಸ್‌ಗಳನ್ನು ಪಡೆಯಬಹುದಾಗಿದೆ. ವಿದ್ಯಾರ್ಥಿಗಳು ಸದರಿ ಸೌಲಭ್ಯವನ್ನು ಸದುಪಯೋಗ ಪಡೆದುಕೊಳ್ಳುವಂತೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಮುಖ್ಯ ಸಂಚಾರ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.