ಸಕ್ಕರೆ ಆಯುಕ್ತರ ಕಚೇರಿ ಶೀಘ್ರ ಬೆಳಗಾವಿಗೆ ಸ್ಥಳಾಂತರ: ಮುಖ್ಯಮಂತ್ರಿ ಬೊಮ್ಮಾಯಿ

ಸಕ್ಕರೆ ಆಯುಕ್ತರ ಕಚೇರಿ ಶೀಘ್ರ ಬೆಳಗಾವಿಗೆ ಸ್ಥಳಾಂತರ: ಮುಖ್ಯಮಂತ್ರಿ ಬೊಮ್ಮಾಯಿ

ಚಳಿಗಾಲದ ಅಧಿವೇಶನವನ್ನು ಬೆಳಗಾವಿಯಲ್ಲಿ ನಡೆಸಲು ಯೋಜಿಸಲಾಗಿದೆ. ಬೆಂಗಳೂರಿನಲ್ಲಿರುವ ಸಕ್ಕರೆ ಆಯುಕ್ತರ ಕಚೇರಿಯನ್ನು ಸುವರ್ಣಸೌಧಕ್ಕೆ ಸ್ಥಳಾಂತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಬೆಳಗಾವಿ ಸುವರ್ಣಸೌಧದಲ್ಲಿ ಸುದ್ದಿಗಾರರೊಂದಿಗೆ ಅವರು ಶನಿವಾರ ಮಾತನಾಡಿ, ಕೊರೋನಾ ಮೂರನೇ ಅಲೆ ಆತಂಕ ದೂರವಾಗಿಲ್ಲ. ಎಲ್ಲ ಜಿಲ್ಲೆಗಳಲ್ಲಿ ಮಕ್ಕಳ ಆರೋಗ್ಯ ಕೇಂದ್ರಗಳನ್ನು ತೆರೆಯುವಂತೆ ಸೂಚನೆ ನೀಡಲಾಗಿದೆ. ಬೆಳಗಾವಿಯಲ್ಲೂ ಮಕ್ಕಳ ಆರೋಗ್ಯ ಕೇಂದ್ರ ಸ್ಥಾಪಿಸಲಾಗುವುದು. ಕೊರೋನಾ ನಿಯಂತ್ರಣಕ್ಕೆ ಎಲ್ಲ ಮುಂಜಾಗ್ರತೆ ವಹಿಸುವಂತೆ ಸೂಚಿಸಲಾಗಿದೆ. ಅಗತ್ಯ ಇರುವ ಕಡೆ ಕೊರೋನಾ ತಪಾಸಣೆ ಕೇಂದ್ರ ತೆರೆಯಲು ತಿಳಿಸಲಾಗಿದೆ ಎಂದು ತಿಳಿಸಿದರು.