ಸಿವಿಲ್ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆಗೆ ತರಬೇತಿ

ಸಿವಿಲ್ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆಗೆ ತರಬೇತಿ
ಬೆಳಗಾವಿ: ಕರ್ನಾಟಕ ಸರ್ಕಾರವು ಮುಂದಿನ ದಿನಗಳಲ್ಲಿ ನಡೆಸಲಿರುವ ಪೊಲೀಸ್ ಇಲಾಖೆಯಲ್ಲಿನ ಸಾವಿರಕ್ಕೂ ಹೆಚ್ಚು ಸಿವಿಲ್ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ 'ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ತರಬೇತಿ ನೀಡಲು ನಿರ್ಧರಿಸಲಾಗಿದೆ.
ಆಸಕ್ತರು ಸೆಪ್ಟೆಂಬರ್ 07ರ ಒಳಗಾಗಿ ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ 'ಮುಕ್ತಗಂಗೋತ್ರಿ' ಆವರಣದಲ್ಲಿರುವ 'ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ'ದ ಕಛೇರಿಯಲ್ಲಿ ಬೆಳಿಗ್ಗೆ 10. ಗಂಟೆಯಿಂದ ಸಂಜೆ 4 ಗಂಟೆಯೊಳಗಾಗಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದೆಂದು ಕರಾಮುವಿ ಕುಲಸಚಿವ ಪ್ರೊ. ಆರ್. ರಾಜಣ್ಣ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ವಿವರಗಳಿಗೆ 0821-2515944 ಈ ದೂರವಾಣಿ ಸಂಖ್ಯೆಯಲ್ಲಿ ಸಂಪರ್ಕಿಸಬಹುದಾಗಿದೆ.