ಶಿಕ್ಷಕರ ಅರ್ಹತಾ ಪರೀಕ್ಷೆ (TET); ಅಭ್ಯರ್ಥಿಗಳಿಗೆ ತೀವ್ರ ನಿರಾಸೆ

ಶಿಕ್ಷಕರ ಅರ್ಹತಾ ಪರೀಕ್ಷೆ (TET); ಅಭ್ಯರ್ಥಿಗಳಿಗೆ ತೀವ್ರ ನಿರಾಸೆ
 
 

ಬೆಂಗಳೂರು: ಇತ್ತೀಚಿಗೆ ನಡೆದ 2021 ನೇ ಸಾಲಿನ ಶಿಕ್ಷಕರ ಅರ್ಹತಾ ಪರೀಕ್ಷೆ ಫಲಿತಾಂಶ‌ ಸೋಮವಾರ ಪ್ರಕಟಗೊಂಡಿದ್ದು, ಶಿಕ್ಷಕ ಹುದ್ದೆ ಆಕಾಂಕ್ಷಿಯಾಗಿದ್ದ ಅಭ್ಯರ್ಥಿಗಳಿಗೆ ತೀವ್ರ ನಿರಾಸೆಯಾಗಿದೆ. ಕಾರಣ ಪರೀಕ್ಷೆ ಬರೆದ ಅತ್ಯಂತ ಕಡಿಮೆ ಅಭ್ಯರ್ಥಿಗಳು ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ.

 

 
 ಸಾರ್ವಜನಿಕ ಶಿಕ್ಷಣ ಇಲಾಖೆಯ ಮಾಹಿತಿ ಪ್ರಕಾರ, 
1ರಿಂದ 5ನೇ ತರಗತಿಗೆ ಬೋಧಿಸುವ ಕಿರಿಯ ಪ್ರಾಥಮಿಕ ಶಾಲಾ ಶಿಕ್ಷಕರ ಅರ್ಹತೆಗಾಗಿ ನಡೆದ ಪರೀಕ್ಷೆಯಲ್ಲಿ ಶೇ.20.34 ರಷ್ಟು ಅಭ್ಯರ್ಥಿಗಳು ಉತ್ತೀರ್ಣರಾಗಿದ್ದರೆ, 6ರಿಂದ 8ನೇ ತರಗತಿವರೆಗಿನ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕರ ಅರ್ಹತೆ ಪರೀಕ್ಷೆಯಲ್ಲಿ ಶೇ.18.82 ಅಭ್ಯರ್ಥಿಗಳು ಮಾತ್ರ ಉತ್ತೀರ್ಣರಾಗಿದ್ದಾರೆ.
 

ಒಟ್ಟಾರೆ ಶೇ.19.34 ಅಭ್ಯರ್ಥಿಗಳು ಮಾತ್ರ ಶಿಕ್ಷಕರ ಹುದ್ದೆಗಳಿಗೆ ಅರ್ಹತೆ ಪಡೆದಿದ್ದು, ಇದರಿಂದಾಗಿ ದೊಡ್ಡ ಸಂಖ್ಯೆಯಲ್ಲಿ ಪರೀಕ್ಷೆ ಬರೆದಿದ್ದ ಶಿಕ್ಷಕ ಹುದ್ದೆಯ ಆಕಾಂಕ್ಷಿಗಳು ತೀವ್ರ ನಿರಾಸೆಗೊಂಡಿದ್ದಾರೆ.