ಬೆಳಗಾವಿಯಲ್ಲಿ ಮಹಿಳೆಯರಿಗೆ ಉಚಿತ ಹೊಲಿಗೆ ತರಬೇತಿ: ಅರ್ಜಿ ಆಹ್ವಾನ  

ಬೆಳಗಾವಿಯಲ್ಲಿ ಮಹಿಳೆಯರಿಗೆ ಉಚಿತ ಹೊಲಿಗೆ ತರಬೇತಿ: ಅರ್ಜಿ ಆಹ್ವಾನ  

 

ಬೆಳಗಾವಿ: ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ (ಸಿಬಿಆರ್‍ಸೆಟಿ) ಬೆಳಗಾವಿಯಲ್ಲಿ, ಜಿಲ್ಲೆಯ ಗ್ರಾಮೀಣ ಯುವತಿಯರಿಗೆ ಅ.01 ರಿಂದ 30 ರವರೆಗೆ 30 ದಿನಗಳ ಅವಧಿಯ ಉಚಿತ ಮಹಿಳಾ ಹೊಲಿಗೆ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ. 


 ಭಾಗವಹಿಸಲಿರುವ ಅಭ್ಯರ್ಥಿಯು 18 ರಿಂದ 45 ವರ್ಷದ ವಯೋಮಿತಿಯಲ್ಲಿರಬೇಕು. ತರಬೇತಿ ಪಡೆದ ನಂತರ ಸ್ವ-ಉದ್ಯೋಗ ಕೈಗೊಳ್ಳಲು ಸಿದ್ಧರಿರಬೇಕು. ತರಬೇತಿಯು ಉಚಿತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತ ಊಟ ಮತ್ತು ವಸತಿ ಸೌಲಭ್ಯವಿರುತ್ತದೆ.


  ತರಬೇತಿ ಪಡೆಯಲು ಇಚ್ಛಿಸುವ ಅಭ್ಯರ್ಥಿಗಳು, ಬಿಳಿ ಹಾಳೆಯ ಮೇಲೆ ಅಥವಾ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ದೊರೆಯುವ ಅರ್ಜಿ ನಮೂನೆಯಲ್ಲಿ ತಮ್ಮ ಹೆಸರು, ವಿಳಾಸ ಮುಂತಾದ ಮಾಹಿತಿಗಳನ್ನು ಬರೆದು, ಅರ್ಜಿಯ ಜೊತೆ ಆಧಾರ ಕಾರ್ಡ್ ಮತ್ತು ರೇಶನ್ ಕಾರ್ಡ್ ಝೆರಾಕ್ಸ್ ಪ್ರತಿಗಳನ್ನು ಲಗತ್ತಿಸಿ, ಸೆಪ್ಟೆಂಬರ್ 30 ರ ಒಳಗಾಗಿ ಸಿಬಿಆರ್‍ಸೆಟಿ ಸಂಸ್ಥೆಗೆ ತಲುಪುವಂತೆ ಕಳುಹಿಸಬೇಕು.


 ಹೆಚ್ಚಿನ ಮಾಹಿತಿಗಾಗಿ ನಿರ್ದೇಶಕರು, ಕೆನರಾ ಬ್ಯಾಂಕ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ (ಸಿಬಿ ಆರ್‍ಸೆಟಿ) ಪ್ಲಾಟ ನಂ. ಸಿಎ-03 (ಪಾರ್ಟ) ಕಣಬರ್ಗಿ ಇಂಡಸ್ಟ್ರಿಯಲ್ ಎರಿಯಾ, ಆಟೋ ನಗರ, ಬೆಳಗಾವಿ. ಈ ವಿಳಾಸಕ್ಕೆ ಸಂಪರ್ಕಿಸಬಹುದು ಹಾಗೂ ದೂರವಾಣಿ ಸಂಖ್ಯೆ 0831-2440644, ಮೊಬೈಲ್ ಸಂಖ್ಯೆ 9845750043, 8296792166, 8660038694 ಅಥವಾ 8867388906 ನ್ನು ಸಂಪರ್ಕಿಸಬಹುದು ಎಂದು ಕೆನರಾ ಬ್ಯಾಂಕ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಕಿ ತಿಳಿಸಿದ್ದಾರೆ.