ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರುವ ವ್ಯಕ್ತಿ, ಸಂಸ್ಥೆಗಳಿಂದ ರಾಜ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರುವ ವ್ಯಕ್ತಿ, ಸಂಸ್ಥೆಗಳಿಂದ ರಾಜ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

 

 

ಬೆಳಗಾವಿ: 2021-22 ನೇ ಸಾಲಿನ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ವ್ಯಕ್ತಿ ಮತ್ತು ಸಂಸ್ಥೆಗಳಿಗೆ ರಾಜ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

 

 ಕನ್ನಡ ಭಾಷೆಯಲ್ಲಿ ಭರ್ತಿ ಮಾಡಿದ ಅರ್ಜಿಗಳನ್ನು ಅ. 5 ರ ಒಳಗಾಗಿ ಸಲ್ಲಿಸಬಹುದು. ನಂತರ ಸಲ್ಲಿಸಿದ ಅರ್ಜಿಗಳನ್ನು ಯಾವುದೇ ಕಾರಣಕ್ಕೂ ಪರಿಗಣಿಸಲಾಗುವುದಿಲ್ಲ.

 

 ಕರ್ನಾಟಕ ಸರ್ಕಾರವು ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಠ 5 ವರ್ಷಗಳ ಕಾಲ ಅತ್ಯುತ್ತಮ ಸೇವೆ ಸಲ್ಲಿಸಿರುವಂತಹ ವ್ಯಕ್ತಿಗಳಿಗೆ ತಲಾ ರೂ.25,000/- ಗಳ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಹಾಗೂ ಸಂಸ್ಥೆಗಳಿಗೆ ತಲಾ ರೂ. 1,00,000/- ಲಕ್ಷಗಳ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರವನ್ನು ಮಕ್ಕಳ ದಿನಾಚರಣೆಯಂದು ಪ್ರಧಾನ ಮಾಡಿ ಗೌರವಿಸಲಾಗುವುದು. ಅರ್ಜಿ ನಮೂನೆಗಳನ್ನು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿವಾಜಿ ನಗರ ಇವರಿಂದ ಪಡೆಯಬಹುದಾಗಿದೆ.