ಚಿಕ್ಕೋಡಿ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರಕಾರಿ ವಕೀಲ ಹುದ್ದೆಗೆ ಅರ್ಜಿ ಆಹ್ವಾನ

ಚಿಕ್ಕೋಡಿ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರಕಾರಿ ವಕೀಲ ಹುದ್ದೆಗೆ ಅರ್ಜಿ ಆಹ್ವಾನ

 

ಬೆಳಗಾವಿ : ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ಹಿರಿಯ ಶ್ರೇಣಿ  ನ್ಯಾಯಾಲಯದ ಅಪರ  ಸರಕಾರಿ ವಕೀಲರ ಹುದ್ದೆಗೆ ಹೊಸ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಏಳು ವರ್ಷಗಳ ಕಾಲ ವಕೀಲ ವೃತ್ತಿಯನ್ನು ಪೂರೈಸಿದ ಅರ್ಹ ವಕೀಲರುಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

 

 

          ಆಸಕ್ತರು ತಮ್ಮ ಹೆಸರು, ವಿದ್ಯಾರ್ಹತೆ, ಜಾತಿ, ವಯಸ್ಸು, ಅನುಭವ ಮುಂತಾದ ವೈಯಕ್ತಿಕ ಪೂರ್ಣ ವಿವರಗಳೊಂದಿಗೆ ಹಾಗೂ ಸಮರ್ಥನೆಗಾಗಿ ಅವಶ್ಯಕ ಪತ್ರಗಳ ದೃಢೀಕೃತ ನಕಲುಗಳನ್ನು ಲಗತ್ತಿಸಿ ಅಕ್ಟೋಬರ್ 11 ರ ಒಳಗಾಗಿ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಆಡಳಿತ ಶಾಖೆಗೆ ಅರ್ಜಿಗಳನ್ನು ಸಲ್ಲಿಸಬಹುದು ಮತ್ತು ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.