ಮೊರಾರ್ಜಿ ದೇಸಾಯಿ ವಸತಿ ಶಾಲೆ, 6 ನೇ ತರಗತಿ ಪ್ರವೇಶ: ಅರ್ಜಿ ಆಹ್ವಾನ

ಮೊರಾರ್ಜಿ ದೇಸಾಯಿ ವಸತಿ ಶಾಲೆ, 6 ನೇ ತರಗತಿ ಪ್ರವೇಶ: ಅರ್ಜಿ ಆಹ್ವಾನ

ಬೆಳಗಾವಿ: 2021-22 ನೇ ಸಾಲಿನ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ ಪ್ರವೇಶ ನೀಡಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 

 6 ನೇ ತರಗತಿಗೆ ಪ್ರವೇಶಕ್ಕಾಗಿ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ವಿದ್ಯಾರ್ಥಿಗಳು ಅರ್ಜಿಗಳನ್ನು ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಹಾಗೂ ಸಂಬಂಧಪಟ್ಟ ವಸತಿ ಶಾಲೆಗಳಿಂದ ಅರ್ಜಿ ನಮೂನೆಯನ್ನು ಪಡೆದು ಭರ್ತಿ ಮಾಡಿ ಆಗಸ್ಟ್ 28 ರ ಒಳಗಾಗಿ ಅರ್ಜಿಗಳನ್ನು ಸಲ್ಲಿಸಬಹುದು 

ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ನಿಬಂಧನೆಗಳು: 
 6 ನೇ ತರಗತಿ ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಪಾರ್ಸಿ, ಸಿಖ್ ಸಮುದಾಯದವರಿಗೆ ಶೇ. 75 ಹಾಗೂ ಇತರೆ ಸಮುದಾಯದ ವಿದ್ಯಾರ್ಥಿಗಳಿಗೆ ಶೇ. 25 ಸ್ಥಾನಗಳ ಅವಕಾಶವಿರುತ್ತದೆ.  ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರ ಕುಟುಂಬದ ವಾರ್ಷಿಕ ಆದಾಯ ರೂ. 1ಲಕ್ಷಕ್ಕೆ ಮೀರಿರಬಾರದು, ಪ್ರವೇಶ ಪರೀಕ್ಷೆ ಮುಖಾಂತರ ವಿದ್ಯಾರ್ಥಿಗಳ ಆಯ್ಕೆ ಮಾಡಿಕೊಳ್ಳಲಾಗುವುದು, ಪ್ರವೇಶ ಬಯಸುವ ವಿದ್ಯಾರ್ಥಿಗಳು ತೃತಿಯ ಭಾಷೆಯಾಗಿ ಹಿಂದಿ ಅಥವಾ ಉರ್ದು ಭಾಷೆ ಆಯ್ಕೆ ಮಾಡಲು ಮುಕ್ತ ಅವಕಾಶವಿದೆ. 

 ಆಸಕ್ತ ವಿದ್ಯಾರ್ಥಿಗಳು ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಮೌಲಾನಾ ಆಜಾದ್ ಅಲ್ಪಸಂಖ್ಯಾತರ ಭವನ ಕೆ.ಎಸ್.ಸಿ.ಎ ಕ್ರಿಕೆಟ್ ಕ್ರೀಡಾಂಗಣ ಎದುರುಗಡೆ, ರಾಮತೀರ್ಥ ನಗರ ಬೆಳಗಾವಿ ಗೆ ಸಲ್ಲಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

 ಹೆಚ್ಚಿನ ಮಾಹಿತಿಗಾಗಿ ಕಿತ್ತೂರು ತಾಲೂಕಿನ ಹೂಲಿಕಟ್ಟಿ ಅ.ಸಂ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಭರ್ತಿ ಮಾಡಬೇಕಾದ ಸೀಟ್ ಸಂಖ್ಯೆ 60 ದೂ.7026223373,  ಚಿಕ್ಕೋಡಿ ತಾಲೂಕಿನ ಹಿರೇಕೋಡಿ  ದೂ.8147340346, ಬೆಳಗಾವಿ ನಗರ ದೂ. 7406516596, ಮೂಡಲಗಿ ದೂ.  7259870188, ರಾಮದುರ್ಗ ತಾಲೂಕಿನ ಸಾಲಿಹಳ್ಳಿ ದೂ. 8194227454, ಕಾಗವಾಡ ತಾಲೂಕಿನ ಐನಾಪುರ ವಸತಿ ಶಾಲೆಯಲ್ಲಿ ಭರ್ತಿ ಮಾಡಬೇಕಾದ ಸೀಟ್ ಸಂಖ್ಯೆ 50 ಹಾಗೂ ದೂ. 9844849238 ಗೆ ಸಂಪರ್ಕಿಸಬಹುದು.