ಅಸಾಧಾರಣ ಸಾಧನೆ ಮಾಡಿರುವ ಮಕ್ಕಳಿಗೆ ಜಿಲ್ಲಾಮಟ್ಟದ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

ಅಸಾಧಾರಣ ಸಾಧನೆ ಮಾಡಿರುವ ಮಕ್ಕಳಿಗೆ ಜಿಲ್ಲಾಮಟ್ಟದ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

 ಬೆಳಗಾವಿ: ನಾವಿನ್ಯತೆ, ತಾರ್ಕಿಕ (scholastic) ಕ್ರೀಡೆ ಹಾಗೂ ಕಲೆ (ಚಿತ್ರಕಲೆ, ಸಾಂಸ್ಕೃತಿಕ, ಸಂಗೀತ) ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆಯನ್ನು ಮಾಡಿರುವ ಮಕ್ಕಳಿಗೆ ಜಿಲ್ಲಾಮಟ್ಟದ ಪ್ರಶಸ್ತಿಯನ್ನು ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. 

 ಸದರಿ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆಯನ್ನು ಮಾಡಿರುವ 5 ರಿಂದ 18 ವರ್ಷದೊಳಗಿನ ಮಕ್ಕಳನ್ನು 2021ನೇ ಸಾಲಿಗೆ ಆಯ್ಕೆ ಮಾಡಲಾಗುವುದು ಮತ್ತು ಜಿಲ್ಲಾ ಮಟ್ಟದ ಪ್ರಶಸ್ತಿಯ ಜೊತೆಗೆ ರೂ.10,000 ಗಳ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರಗಳನ್ನು ನೀಡಲಾಗುವುದು. 

 ಈ ಪ್ರಶಸ್ತಿಗೆ ಆಯ್ಕೆಯಾಗುವಂತಹ ಮಕ್ಕಳು ಅಪ್ರತಿಮ ಪ್ರತಿಭೆಯುಳ್ಳವರಾಗಿದ್ದು, ಅಂತರಾಷ್ಟ್ರೀಯ, ರಾಷ್ಟ್ರೀಯ, ರಾಜ್ಯ ಮಟ್ಟದಲ್ಲಿ ಸಾಧನೆ ಮಾಡಿರಬೇಕು ಈ ಕುರಿತು ಸಮರ್ಥಿಸಲು ಪೂರಕ ದಾಖಲಾತಿಗಳನ್ನು ಒದಗಿಸಬೇಕು ಹಾಗೂ ಅವರ ಸಾಧನೆಯ ಬಗ್ಗೆ ದಿನಪತ್ರಿಕೆಗಳಲ್ಲಿ ವರದಿಯಾಗಿರಬೇಕು. ಮಕ್ಕಳ ವಯಸ್ಸಿನ ಪ್ರಮಾಣ ಪತ್ರವನ್ನು ಪತ್ರಾಂಕೀತ ಅಧಿಕಾರಿಗಳಿಂದ ದೃಢಿಕರಿಸಿ ಸಲ್ಲಿಸಬೇಕು. ಈ ಹಿಂದೆ ಯಾವುದಾದರೂ ವರ್ಷದಲ್ಲಿ ಅರ್ಜಿ ಪ್ರಶಸ್ತಿಗೆ ಪರಿಗಣಿಸಲ್ಪಟ್ಟಿದ್ದಲ್ಲಿ ಪುನಃ ಅದನ್ನು ಪರಿಗಣಿಸಲಾಗುವುದಿಲ್ಲ.
 
 2021ನೇ ವರ್ಷದ ಪ್ರಶಸ್ತಿಗೆ ನಿಗದಿಪಡಿಸಿದ ಅರ್ಜಿ ನಮೂನೆಗಳನ್ನು ಬೆಳಗಾವಿ ಜಿಲ್ಲೆಗೆ ಸಂಬಂಧಿಸಿದವರು , ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿ, ಶಿವಾಜಿ ನಗರ ಬೆಳಗಾವಿ ಇವರಿಂದ ಪಡೆದು ಕನ್ನಡ ಭಾಷೆಯಲ್ಲಿ ಭರ್ತಿ ಮಾಡಿದ ಅರ್ಜಿಗಳನ್ನು ಸೆಪ್ಟೆಂಬರ್ 10 ರೊಳಗೆ ಜಿಲ್ಲಾ ಕಚೇರಿಗೆ ಸಲ್ಲಿಸಬೇಕು. 

 ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಚೇರಿ,  ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿವಾಜಿನಗರ ಬೆಳಗಾವಿ ಇಲ್ಲಿಗೆ ಸಂಪರ್ಕಿಸಬಹುದು ಅಥವಾ ಕಚೇರಿಯ ದೂರವಾಣಿ ಸಂಖ್ಯೆ: 0831-2407235 ಯನ್ನು ಸಂಪರ್ಕಿಸಬಹುದು. ನಿಗದಿತ ದಿನಾಂಕದ ನಂತರ ಸಲ್ಲಿಸಿದ ಅರ್ಜಿಗಳನ್ನು  ಪರಿಗಣಿಸಲಾಗುವದಿಲ್ಲಾ ಎಂದು ಬೆಳಗಾವಿಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
.