ಟೂರಿಸ್ಟ್ ಗೈಡ್ ತರಬೇತಿ ಪಡೆಯಲು ಒಳ್ಳೆಯ ಅವಕಾಶ

ಟೂರಿಸ್ಟ್ ಗೈಡ್ ತರಬೇತಿ ಪಡೆಯಲು ಒಳ್ಳೆಯ ಅವಕಾಶ

 

 

ಬೆಳಗಾವಿ: ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‍ಸೆಟ್ ಸಂಸ್ಥೆಯು ದಾಂಡೇಲಿಯಲ್ಲಿ 10 ದಿನಗಳ ಉಚಿತ "ಟ್ರಾವೆಲ್ & ಟೂರಿಸ್ಟ್ ಗೈಡ್” ತರಬೇತಿಯನ್ನು ಹಮ್ಮಿಕೊಂಡಿದೆ.

 

 

ತರಬೇತಿಗೆ 18-45 ವಯೋಮಿತಿಯ ಯುವಕರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಯುವಕರು ತಮ್ಮ ಹೆಸರು, ಹುಟ್ಟಿದ ದಿನಾಂಕ, ಪೂರ್ಣ ಪೋಸ್ಟಲ್ ವಿಳಾಸ, ಮೊಬೈಲ್ ಸಂಖ್ಯೆ, ವಿದ್ಯಾರ್ಹತೆ, ತರಬೇತಿಯ ಅವಶ್ಯಕತೆ ಒಳಗೊಂಡು ಅರ್ಜಿಯನ್ನು ಸೆಪ್ಟೆಂಬರ್ 15 ರ ಒಳಗಾಗಿ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‍ಸೆಟ್ ವಿಸ್ತರಣಾ ಕೇಂದ್ರ ಹಸನಮಾಳ, ದಾಂಡೇಲಿ-581325 ಗೆ ಸಲ್ಲಿಸಬಹುದು.

 

 

ಈ ತರಬೇತಿಯು ಸ್ವ-ಉದ್ಯೋಗ ಮಾಡಲು ಅನುಕೂಲವಾಗಲಿದೆ. ತರಬೇತಿಯಲ್ಲಿ ಊಟ ವಸತಿ ಉಚಿತವಾಗಿರುತ್ತದೆ.         ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂ. 9449782425, 6363429889 ಗೆ ಸಂಪರ್ಕಿಸಬಹುದು ಎಂದು ಕೆನರಾ ಬ್ಯಾಂಕ್ ದೇಶಪಾಂಡೆ ಆರ್ ಸೆಟ್ ಸಂಸ್ಥೆಯ ನಿರ್ದೇಶಕರಾದ ಪ್ರಸನ್ನಕುಮಾರ್ ಕುಲಕರ್ಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.