ಹುಕ್ಕೇರಿಯ ಗರ್ಭಿಣಿ ಮಹಿಳೆಯಲ್ಲಿ ಕೊರೊನಾ?

ಬೆಳಗಾವಿ:  ಹುಕ್ಕೇರಿ ತಾಲೂಕಿನ ಎರಡು ಗ್ರಾಮಗಳಲ್ಲಿ ಕ್ವಾರಂಟೈನ್ ಮಾಡಲಾಗಿರುವ, ಮುಂಬೈನಿಂದ ಆಗಮಿಸಿರುವ ಜನರ ಪೈಕಿ ಇಬ್ಬರಲ್ಲಿ ಕೊರೊನಾ ಸೋಂಕು ತಗುಲಿದೆ ಎನ್ನುವ ಸುದ್ದಿ ಹರಿದಾಡುತ್ತಿದ್ದು, ಆ ಎರಡೂ ಗ್ರಾಮಗಳಲ್ಲಿನ ಜನರು ಆತಂಕಕ್ಕೆ ಒಳಗಾಗಿದ್ದಾರೆ.

ಸೋಂಕು ಪತ್ತೆಯಾಗಿರುವ ಇಬ್ಬರಲ್ಲಿ ಒಬ್ಬರು ಗರ್ಭಿಣಿ ಮಹಿಳೆ ಆಗಿದ್ದಾರೆ ಎನ್ನುವ ಸುದ್ದಿ ಇದ್ದು, ಇಬ್ಬರನ್ನೂ ಬೆಳಗಾವಿಯ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ ಎನ್ನಲಾಗಿದೆ. ವಾರದ ಹಿಂದೆ ಬೆಳಗಾವಿಯಲ್ಲಿ ಸದಾಶಿವ ನಗರದ ಗರ್ಭಿಣಿ ಮಹಿಳೆಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿತ್ತು.

Visits: 420

Leave a Reply

Your email address will not be published. Required fields are marked *

You cannot copy content of this page