ವಿವಿಧ ಇಲಾಖೆಗಳಲ್ಲಿನ ಖಾಲಿ ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳ ನೇಮಕಕ್ಕೆ ಸ್ಪರ್ಧಾತ್ಮಕ ಪರೀಕ್ಷೆ ದಿನಾಂಕ ಪ್ರಕಟ

ವಿವಿಧ ಇಲಾಖೆಗಳಲ್ಲಿನ ಖಾಲಿ ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳ ನೇಮಕಕ್ಕೆ ಸ್ಪರ್ಧಾತ್ಮಕ ಪರೀಕ್ಷೆ ದಿನಾಂಕ ಪ್ರಕಟ

 

 

ಬೆಳಗಾವಿ: ಕರ್ನಾಟಕ ಲೋಕಸೇವಾ ಆಯೋಗದ ಅಧಿಸೂಚನೆಯಂತೆ ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 2019 - 20 ನೇ ಸಾಲಿನ ಕಿರಿಯ ಸಹಾಯಕರು/ ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಸಪ್ಟೆಂಬರ್ 18 ರಂದು ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ ಮತ್ತು ಸಪ್ಟೆಂಬರ್ 19 ರಂದು ಎರಡು ಅಧಿವೇಶನಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲಾಗುವುದು.

 

 

ದೃಷ್ಟಿಮಾಂಧ್ಯರು, ಚಲನ ವೈಕಲ್ಯ, ಮೆದುಳಿನ ಪಾರ್ಶ್ವವಾಯು ಅಂಗವಿಕಲತೆ ಅಥವಾ ಇತರೆ ಎದ್ದು ಕಾಣುವ ಅಂಗವಿಕಲತೆ ಹೊಂದಿರುವ ಅಭ್ಯರ್ಥಿಗಳಿಗೆ ಲಿಪಿಕಾರರ ಸೇವೆಯನ್ನು ಕೋರುವ ಅವಕಾಶ ಕಲ್ಪಿಸಲಾಗಿದೆ. ಪರೀಕ್ಷೆಗಳಿಗೆ ಸಂಬಂಧಿಸಿದ ಪ್ರವೇಶ ಪತ್ರಗಳನ್ನು ಅಭ್ಯರ್ಥಿಗಳು ಆಯೋಗದ ವೆಬಸೈಟ್ http://kpsc.kar.nic.in ನಿಂದ ಡೌನಲೋಡ್ ಮಾಡಿಕೊಳ್ಳಬಹುದಾಗಿದೆ.