ಕೋರ್ಟ್ ತಡೆಯಾಜ್ಞೆ; ಮುಂದೂಡಿಕೆಯಾದ ಸರ್ಕಾರಿ ಶಿಕ್ಷಕರ ಸಾಮಾನ್ಯ ವರ್ಗಾವಣೆ ಪ್ರಕ್ರಿಯೆ

   ಕೋರ್ಟ್ ತಡೆಯಾಜ್ಞೆ; ಮುಂದೂಡಿಕೆಯಾದ ಸರ್ಕಾರಿ ಶಿಕ್ಷಕರ ಸಾಮಾನ್ಯ ವರ್ಗಾವಣೆ ಪ್ರಕ್ರಿಯೆ

 

 

ಬೆಳಗಾವಿ: 2020 -21 ನೇ ಸಾಲಿನ ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರು ಒಳಗೊಂಡಂತೆ ಪ್ರಾಥಮಿಕ ಶಾಲಾ ಶಿಕ್ಷಕರು, ಪ್ರೌಢಶಾಲಾ ಶಿಕ್ಷಕರು, ತತ್ಸಮಾನ ವೃಂದದ ಶಿಕ್ಷಕರು, ಸರ್ಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕರು ಹಾಗೂ ತತ್ಸಮಾನ ವೃಂದದ ಅಧಿಕಾರಿಗಳ ಸಾಮಾನ್ಯ ವರ್ಗಾವಣೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ.

 

 

ಈ ಕುರಿತಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಪ್ರಕಟಣೆ ಆದೇಶ ಹೊರಡಿಸಿದ್ದಾರೆ. ವರ್ಗಾವಣೆ ಪ್ರಕ್ರಿಯೆಗೆ ಸಂಬಂಧಪಟ್ಟಂತೆ ಕೆಲವರು ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ (KAT) ಯಲ್ಲಿ ಹೂಡಿದ ದಾವೆ ಪ್ರಕರಣದಲ್ಲಿ ತಡೆಯಾಜ್ಞೆ ನೀಡಲಾಗಿದೆ. ತಡೆಯಾಜ್ಞೆ ಹಿನ್ನೆಲೆಯಲ್ಲಿ ಸರ್ಕಾರಿ ಶಿಕ್ಷಕರ ಸಾಮಾನ್ಯ ವರ್ಗಾವಣೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂದು ಆದೇಶದಲ್ಲಿ ತಿಳಿಸಿಲಾಗಿದೆ.