ಬೆಳಗಾವಿ ಮಹಾನಗರಕ್ಕೆ ಸರ್ಕಾರಿ ಮಹಿಳಾ ಸಂಜೆ ಕಾಲೇಜು ಮಂಜೂರು

ಬೆಳಗಾವಿ ಮಹಾನಗರಕ್ಕೆ ಸರ್ಕಾರಿ ಮಹಿಳಾ ಸಂಜೆ ಕಾಲೇಜು ಮಂಜೂರು

 

ಬೆಳಗಾವಿ: ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ವತಿಯಿಂದ ಬೆಳಗಾವಿ ಸೇರಿದಂತೆ ರಾಜ್ಯದ 11 ಮಹಾನಗರಗಳಲ್ಲಿ ಪ್ರಾಯೋಗಿಕವಾಗಿ ಸರ್ಕಾರಿ ಪ್ರಥಮ ದರ್ಜೆ ಸಂಜೆ ಕಾಲೇಜುಗಳನ್ನು ಸಂಧ್ಯಾ ಶಕ್ತಿ ಯೋಜನೆಯಡಿ ಪ್ರಾಯೋಗಿಕವಾಗಿ ಇದೇ ಶೈಕ್ಷಣಿಕ ಸಾಲಿನಿಂದ ಆರಂಭಿಸಲು ಸರ್ಕಾರ ಮುಂದಾಗಿದೆ. ಅದರಂತೆ ಬೆಳಗಾವಿಯಲ್ಲಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಮಂಜೂರಾಗಿದೆ.

 

 

11 ನಗರಪಾಲಿಕೆ ವ್ಯಾಪ್ತಿಯಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿನ ಪ್ರಸ್ತುತ ಅಸ್ತಿತ್ವದಲ್ಲಿರುವ ಮೂಲ ಸೌಕರ್ಯಗಳನ್ನು ಉಪಯೋಗಿಸಿಕೊಂಡು, ವಿದ್ಯಾರ್ಥಿಗಳು ಅತಿ ಹೆಚ್ಚಾಗಿ ಆಯ್ಕೆ ಮಾಡಿಕೊಳ್ಳುವ ಹಾಗೂ ಉತ್ತಮ ಉದ್ಯೋಗಾವಕಾಶಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಅವಕಾಶ ಕಲ್ಪಿಸುವ ಕೋರ್ಸ್ ಗಳಾದ ಬಿ.ಕಾಂ ಮತ್ತು ಬಿಸಿಎ ಗಳನ್ನು ಆರಂಭಿಸಲು ಉದ್ದೇಶಿಸಲಾಗಿದೆ.

 

 

ಬೆಳಗಾವಿ ಸೇರಿದಂತೆ ಬೆಂಗಳೂರು, ತುಮಕೂರು, ಮೈಸೂರು, ಶಿವಮೊಗ್ಗ, ದಾವಣಗೆರೆ, ಮಂಗಳೂರು, ಧಾರವಾಡ, ವಿಜಯಪುರ, ಕಲಬುರ್ಗಿ ಮತ್ತು ಬಳ್ಳಾರಿ ಮಹಾನಗರಗಳಲ್ಲಿ ಪ್ರಥಮ ದರ್ಜೆ ಸಂಜೆ ಕಾಲೇಜುಗಳು ಆರಂಭಗೊಳ್ಳಲಿವೆ.