ನಾಳೆಯಿಂದ ಸಿಇಟಿ ಪರೀಕ್ಷೆ; ಸಾರಿಗೆ ಸಂಸ್ಥೆಯಿಂದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಹೆಚ್ಚಿನ ಬಸ್ ವ್ಯವಸ್ಥೆ

ನಾಳೆಯಿಂದ ಸಿಇಟಿ ಪರೀಕ್ಷೆ; ಸಾರಿಗೆ ಸಂಸ್ಥೆಯಿಂದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಹೆಚ್ಚಿನ ಬಸ್ ವ್ಯವಸ್ಥೆ

 

ಬೆಳಗಾವಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಯು (ಸಿ.ಇ.ಟಿ) ಆಗಸ್ಟ್.28 ಹಾಗೂ 29 ಎರಡು ದಿನ ನಡೆಯಲಿದ್ದು, ವಾ.ಕ.ರ.ಸಾ ಸಂಸ್ಥೆಯಿಂದ ಹೆಚ್ಚುವರಿ ಸಾರಿಗೆ ಸೌಲಭ್ಯ ಒದಗಿಸಲಾಗಿದೆ

 

 

          ಹೆಚ್ಚಿನ ಪರೀಕ್ಷಾ ಕೇಂದ್ರಗಳು ತಾಲೂಕಾ ಹಾಗೂ ಗ್ರಾಮೀಣ ಪ್ರದೇಶಗಳಲಿದ್ದು, ಪರೀಕ್ಷಾರ್ಥಿಗಳಿಗೆ ಸಾರಿಗೆ ಸೌಲಭ್ಯದ ಕೊರತೆಯಾಗದಂತೆ, ನಿಗದಿತ ಸಮಯದಲ್ಲಿ ಪರೀಕ್ಷಾ ಕೇಂದ್ರಗಳನ್ನು ತಲುಪಲು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯಾಪ್ತಿಯಲ್ಲಿನ ಹುಬ್ಬಳ್ಳಿ, ಧಾರವಾಡ, ಹಾವೇರಿ, ಗದಗ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ ಹಾಗೂ ಚಿಕ್ಕೋಡಿ ವಿಭಾಗಗಳ ಎಲ್ಲ ಘಟಕಗಳಿಂದ ಸಿ.ಇ.ಟಿ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳ ಅವಶ್ಯಕತೆ ಹಾಗೂ ಬೇಡಿಕೆಗಳಿಗನುಗುಣವಾಗಿ ಸಾರಿಗೆ ಸೌಲಭ್ಯವನ್ನು ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಎಲ್ಲ ವಿಭಾಗಗಳಿಗೆ ಕಟ್ಟು ನಿಟ್ಟಿನ ಸೂಚನೆ ನೀಡಲಾಗಿದೆ.

 

 

          ಸದರಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಸಾರಿಗೆ ಸೌಲಭ್ಯದ ಸದುಪಯೋಗ ಪಡೆದುಕೊಳ್ಳುವಂತೆ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಮುಖ್ಯ ಸಂಚಾರ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

 

 

ನಿಷೇಧಾಜ್ಞೆ ಜಾರಿ:

 ನಗರದ ಟಿಳಕವಾಡಿಯ ಗೋಗಟೆ ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬೆಂಗಳೂರು ಇವರಿಂದ ವೃತ್ತಿಪರ ಕೋರ್ಸಗಳಿಗಾಗಿ ಅಗಸ್ಟ್ 30 ರಂದು ನಡೆಯಲಿರುವ ಸಾಮಾನ್ಯ ಪ್ರವೇಶ ಪರೀಕ್ಷಾ (ಸಿ.ಇಟಿ) ಕೇಂದ್ರದ ಸುತ್ತ ನಿಷೇದಾಜ್ಞೆ ಜಾರಿಯಾಗಲಿದೆ ಎಂದು ಜಿಲ್ಲಾ ದಂಡಾಧಿಕಾರಿ ಮತ್ತು ಪೊಲೀಸ್ ಆಯುಕ್ತರುರಾದ ಡಾ|| ಕೆ. ತ್ಯಾಗರಾಜನ್ ಆದೇಶ ಹೊರಡಿಸಿದ್ದಾರೆ.

 

 

          ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಪರೀಕ್ಷಾ ಕೇಂದ್ರದ ಸುತ್ತಲು 200 ಮೀಟರ್ ವ್ಯಾಪ್ತಿಯಲ್ಲಿ ನಿಷೇದಾಜ್ಞೆಯನ್ನು ಜಾರಿಗೊಳಿಸಲಾಗಿದ್ದು, ರಾಜ್ಯ ಸರ್ಕಾರದಿಂದ ಹೊರಡಿಸಲಾಗಿರುವ ಕೋವಿಡ್-19 ನಿಯಮಗಳನ್ನು  ಕಡ್ಡಾಯವಾಗಿ ಪಾಲಿಸಬೇಕು. ಪರಿಕ್ಷಾರ್ಥಿಗಳು  ಪರೀಕ್ಷಾ ಸಿಬ್ಬಂದಿ ಜನರು ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿಗಳನ್ನು ಹೊರತುಪಡಿಸಿ ಸಾರ್ವಜನಿಕರು, ಪಾಲಕರಿಗೆ ಪ್ರವೇಶವನ್ನು ನಿಷೇಧಿಸಲಾಗಿದೆ.

 

 

          ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಎಲ್ಲ ಜೆರಾಕ್ಸ ಕೇಂದ್ರ/ ಕಂಪ್ಯೂಟರ್/ ಸೈಬರ್ ಸೆಂಟರಗಳನ್ನು ಕಡ್ಡಾಯವಾಗಿ ಮುಚ್ಚುವದು., ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಯಾವುದೇ ಸಭೆ/ ಸಮಾರಂಭಗಳು ನಡೆಯದಂತೆ ನಿಷೇಧಾಜ್ಞೆಯನ್ನು ವಿಧಿಸಲಾಗಿದ್ದು, ಪರೀಕ್ಷಾ ಕೇಂದ್ರದ ಸುತ್ತಲು 5 ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದನ್ನು ನಿಷೇಧಿಸಲಾಗಿದೆ.

 

         

          ನಿಷೇಧಾಜ್ಞೆಯ ಅವಧಿಯಲ್ಲಿ ಪರೀಕ್ಷಾ ಕೇಂದ್ರದ ಸುತ್ತಲಿನ ಸ್ಥಳದಲ್ಲಿ ಬಹಿರಂಗವಾಗಿ ಘೋಷಣೆ ಮಾಡುವುದು, ಧ್ವನಿವರ್ಧಕಗಳನ್ನು ಉಪಯೋಗಿಸುವುದು, ಪದ ಹಾಡುವುದು, ವಾದ್ಯ ಬಾರಿಸುವುದು, ವ್ಯಾಖನ ಕೊಡುವುದು ಸನ್ನೆ ಅಥವಾ ನಕಲಿ ಪ್ರದರ್ಶನವನ್ನು ಹಾಗೂ ಸಾರ್ವಜನಿಕ ಸಭ್ಯತೆ ಅಥವಾ ನೀತಿಯನ್ನು ಆಕ್ರಮಿಸಬಹುದಾದ ಕೈತ್ಯಗಳನ್ನು ಮಾಡುವುದನ್ನು ನಿಷೇಧಿಸಲಾಗಿದೆ.

 

         

          ಈ ಆಜ್ಞೆಯು ಅಂತ್ಯಕ್ರಿಯೆ ಮೆರವಣಿಗೆಗಳಿಗೆ ಮತ್ತು ಇನ್ನಿತರ ಕಾರಣಗಳಿಗಾಗಿ ಅನುಮತಿ ಪಡೆದು ತೆಗೆಯಿಸಲಾದ ಮೆರವಣಿಗೆಗಳಿಗೆ ಅನ್ವಯಿಸುವದಿಲ್ಲ. ಸದರಿ ಆಜ್ಞೆಯನ್ನು ಉಲ್ಲಂಘಿಸುವವರ ವಿರುದ್ದ ಕಲಂ 188 ಭಾರತೀಯ ದಂಡ ಸಂಹಿತೆಯ ಪ್ರಕಾರ ಕ್ರಮವನ್ನು ಜರುಗಿಸಲು ಸಂಬಂಧಪಟ್ಟ ಪಿ.ಐ ರವರಿಗೆ ಅನುಮತಿ ನೀಡಲಾಗಿದೆ. ಎಂದು ಜಿಲ್ಲಾ ದಂಡಾಧಿಕಾರಿ ಮತ್ತು ಪೊಲೀಸ್ ಆಯುಕ್ತರುರಾದ ಡಾ|| ಕೆ. ತ್ಯಾಗರಾಜನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.