ಬಿಜೆಪಿಯನ್ನು ಮತ್ತೊಮ್ಮೆ ಇಕ್ಕಟ್ಟಿಗೆ ಸಿಲುಕಿಸಿದ ಹೆಚ್.ವಿಶ್ವನಾಥ

ಬೆಂಗಳೂರುಕೆಲದಿನಗಳ ಹಿಂದೆ ಟಿಪ್ಪು ಸುಲ್ತಾನ್‌ನನ್ನು ಹೊಗಳುವ ಮೂಲಕ ಆಡಳಿತಾರೂಢ ಬಿಜೆಪಿಗೆ ಮುಜುಗರ ಉಂಟು ಮಾಡಿದ್ದ ವಿಧಾನಪರಿಷತ್‌ ಸದಸ್ಯ ಎಚ್‌.ವಿಶ್ವನಾಥ್‌, ಇದೀಗ ಮತ್ತೊಮ್ಮೆ ಡ್ರಗ್ಸ್‌ ವಿಚಾರವಾಗಿ ಪಕ್ಷ ಮತ್ತು ಸರ್ಕಾರಕ್ಕೆ ಮುಜುಗರಕ್ಕೀಡಾಗುವಂತೆ ಮಾತನಾಡಿದ್ದಾರೆ.

ಡ್ರಗ್ಸ್‌ ತನಿಖೆಗೆ ಸಂಬಂಧಿಸಿದಂತೆ ಕೇವಲ ಒಂದೇ ವರ್ಗದವರನ್ನು ಕರೆದು ತನಿಖೆ ಮಾಡುತ್ತಿರುವುದನ್ನು ಸಮಾಜ ಪ್ರಶ್ನೆ ಮಾಡುತ್ತಿದೆ. ಅದು ಸಹ ಹೆಣ್ಣು ಮಕ್ಕಳನ್ನೇ ವಿಚಾರಣೆಗೊಳಪಡಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಅಲ್ಲದೆ, ಡ್ರಗ್ಸ್‌ ಜಾಲದಲ್ಲಿ ಕೈಗಾರಿಕೋದ್ಯಮಿಗಳು, ರಾಜಕಾರಣಿಗಳ ಮಕ್ಕಳು, ಮಾಧ್ಯಮದವರು ಇಲ್ಲವೇ ಎಂದೂ ಅವರು ಖಾರವಾಗಿ ಪ್ರಶ್ನಿಸಿದ್ದಾರೆ.  ಡ್ರಗ್ಸ್‌ ಜಾಲದ ಬಗ್ಗೆ ಕಾನೂನಿಗೆ ಗೌರವ ನೀಡುವ ಹಾಲಿ ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.

Leave a Reply

Your email address will not be published. Required fields are marked *

You cannot copy content of this page