ಹೊಸ ಕೊರೊನಾ ಆತಂಕ; ನಾಳೆಯಿಂದ ರಾಜ್ಯದಲ್ಲಿ ನೈಟ್ ಕರ್ಫ್ಯೂ; ಕ್ರಿಶ್ಚಿಯನ್ನರ ಪ್ರಾರ್ಥನೆಗಿಲ್ಲ ತೊಂದರೆ

ಬೆಂಗಳೂರು : ಕರ್ನಾಟಕ ರಾಜ್ಯದಲ್ಲಿ ಇಂದಿನಿಂದ ಜಾರಿ ಮಾಡಲು ಉದ್ದೇಶಿಸಿದ್ದ ರಾತ್ರಿ ಕರ್ಫ್ಯೂ ಬದಲಾಗಿ ನಾಳೆ, ಅಂದರೆ ದಿನಾಂಕ 24.12.2020 ರಿಂದ ಜನವರಿ 01, 2021 ರವರೆಗೆ, ರಾತ್ರಿ 11:00 ಗಂಟೆಯಿಂದ ಬೆಳಗ್ಗೆ 5:00 ಗಂಟೆಯವರೆಗೆ (ದಿನಾಂಕ 02.01.2021ರ ಬೆಳಗ್ಗೆ 5:00 ಗಂಟೆ) ಜಾರಿಯಲ್ಲಿರುತ್ತದೆ ಎಂಬುದಾಗಿ ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ.

ಈ ಕುರಿತಂತೆ ಟ್ವಿಟ್ ಮಾಡಿರುವಂತ ಅವರು, ಕರ್ನಾಟಕ ರಾಜ್ಯದಲ್ಲಿ ಇಂದಿನಿಂದ ಜಾರಿ ಮಾಡಲು ಉದ್ದೇಶಿಸಿದ್ದ ರಾತ್ರಿ ಕರ್ಫ್ಯೂ ಬದಲಾಗಿ ನಾಳೆ, ಅಂದರೆ ದಿನಾಂಕ 24.12.2020 ರಿಂದ ಜನವರಿ 01, 2021 ರವರೆಗೆ, ರಾತ್ರಿ 11:00 ಗಂಟೆಯಿಂದ ಬೆಳಗ್ಗೆ 5:00 ಗಂಟೆಯವರೆಗೆ (ದಿನಾಂಕ 02.01.2021ರ ಬೆಳಗ್ಗೆ 5:00 ಗಂಟೆ) ಜಾರಿಯಲ್ಲಿರುತ್ತದೆ ಎಂಬುದಾಗಿ ತಿಳಿಸಿದ್ದಾರೆ.

ರಾತ್ರಿ ಕರ್ಫ್ಯೂ ಸಂದರ್ಭದಲ್ಲಿ, ದಿನಾಂಕ 24.12.2020 ರ ರಾತ್ರಿ ಕ್ರಿಸ್ ಮಸ್ ಹಬ್ಬದ ಪ್ರಯುಕ್ತ ನಡೆಯಲಿರುವ ವಿಶೇಷ ಧಾರ್ಮಿಕ ಕಾರ್ಯಕ್ರಮಗಳನ್ನು (ಮಿಡ್ ನೈಟ್ ಮಾಸ್) ಯಾವುದೇ ಅಡಚಣೆಯಿಲ್ಲದೆ ಮಾಡಬಹುದು ಎಂಬುದಾಗಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You cannot copy content of this page