ಓರಿಸ್ಸಾ ಮೂಲದ ವ್ಯಕ್ತಿಯಿಂದ ಬೆಳಗಾವಿಯಲ್ಲಿ 2 ಕೆಜಿ ಗಾಂಜಾ ವಶ

ಬೆಳಗಾವಿ: ನಗರದಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಓರಿಸ್ಸಾ ಮೂಲದ ವ್ಯಕ್ತಿಯೋರ್ವನನ್ನು ಅಬಕಾರಿ ಇಲಾಖೆ ಅಧಿಕಾರಿಗಳು ಬಂಧಿಸಿದ್ದು, ಆತನಿಂದ 2.060 ಕೆಜಿ ಒಣ ಗಾಂಜಾ ವಶಪಡಿಸಿಕೊಂಡಿದ್ದಾರೆ.

ಆರೋಪಿಯನ್ನು ಓರಿಸ್ಸಾ ರಾಜ್ಯ ಕಂದಮಾಲ ಜಿಲ್ಲೆಯ ಅನುಕೂಲಚಂದ್ರ ಮಹೇಂದ್ರ ಕನ್ಹಾರ (22) ಎಂದು ಗುರುತಿಸಲಾಗಿದ್ದು, ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಮಹಾಂತೇಶ ನಗರದ ಕೆ.ಎಲ್.ಇ ಕ್ಯಾನ್ಸರ್ ಆಸ್ಪತ್ರೆ ಬಳಿ ಆರೋಪಿಯು ಗಾಂಜಾ ಸಮೇತ ಸಿಕ್ಕಿ ಬಿದ್ದಿದ್ದು, ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಆರೋಪಿ ವಿರುದ್ಧ ಅಬಕಾರಿ ನಿರೀಕ್ಷಕ ರವೀಂದ್ರ ಹೊಸಳ್ಳಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

You cannot copy content of this page