ರಾಜ್ಯದಲ್ಲಿ ‌ಮೂರು‌‌‌ ದಿನ‌ ಭಾರೀ ಮಳೆ ಸಾಧ್ಯತೆ; ಅಲರ್ಟ್ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ ಇಂದಿನಿಂದ ಮೂರು ದಿನ ಭಾರೀ ಮಳೆಯಾಗಲಿದ್ದು, ಹವಾಮಾನ ಇಲಾಖೆಯು ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಿದೆ.

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ತೀವ್ರತೆ ಇನ್ನಷ್ಟು ಹೆಚ್ಚಾಗಿದ್ದರಿಂದ ರಾಜ್ಯದಲ್ಲಿ ಅ.14 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಕಾರಣಕ್ಕೆ ಕರಾವಳಿ ಭಾಗಕ್ಕೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಇಂದು ಕರಾವಳಿ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಇಂದಿನಿಂದ ಅ.14 ರವರೆಗೆ ಅತೀ ಹೆಚ್ಚು ಮಳೆ ಬೀಳಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಬೆಳಗಾವಿ ಜಿಲ್ಲೆಯ ಆಣೆಕಟ್ಟುಗಳು ಬಹುತೇಕ ತುಂಬಿದ್ದು, ಮಳೆದ ಪ್ರಮಾಣ ಇದೇ ರೀತಿಯಲ್ಲಿ ಮುಂದುವರಿದರೆ ಮತ್ತೊಮ್ಮೆ ಪ್ರವಾಹದ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ.

Leave a Reply

Your email address will not be published. Required fields are marked *

You cannot copy content of this page