ಚನ್ನಮ್ಮ ವಿಶ್ವವಿದ್ಯಾಲಯದಿಂದ ವಿದ್ಯಾರ್ಥಿಗಳಿಗೆ ಸುವರ್ಣಾವಕಾಶದ ಪರೀಕ್ಷೆಗಳು

ಚನ್ನಮ್ಮ ವಿಶ್ವವಿದ್ಯಾಲಯದಿಂದ ವಿದ್ಯಾರ್ಥಿಗಳಿಗೆ ಸುವರ್ಣಾವಕಾಶದ ಪರೀಕ್ಷೆಗಳು

 

 

ಬೆಳಗಾವಿ: ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ ಬರುವ ಸ್ನಾತಕ ಹಾಗೂ ಸ್ನಾತಕೋತ್ತರ ಕೋರ್ಸ್ ಗಳ ವಿದ್ಯಾರ್ಥಿಗಳಿಗೆ ಸುವರ್ಣಾವಕಾಶದ ಪರೀಕ್ಷೆಗಳನ್ನು ಸಪ್ಟೆಂಬರ್ 18 ರಿಂದ ಆರಂಭಿಸಲು ನಿರ್ಧರಿಸಲಾಗಿದೆ.

 

 

ವಿದ್ಯಾರ್ಥಿಗಳ ಹಾಗೂ ಜನಪ್ರತಿನಿಧಿಗಳ ಮನವಿಯ ಮೇರೆಗೆ ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ರೂ.1000 ದಂಡದೊಂದಿಗೆ ಪರೀಕ್ಷಾ ಅರ್ಜಿಗಳನ್ನು ಭರಿಸದೇ ಇರುವ ವಿದ್ಯಾರ್ಥಿಗಳಿಗೆ ಸಪ್ಟೆಂಬರ್ 1 ರಿಂದ ಸಪ್ಟೆಂಬರ್ 6 ರ ವರೆಗೆ ಮತ್ತೊಂದು ಅವಕಾಶ ನೀಡಲಾಗಿದೆ.

 

 

ಈ ಮಾಹಿತಿಯನ್ನು ಸಂಬಂಧಿಸಿದ ಪ್ರಾಂಶುಪಾಲರು ವಿದ್ಯಾರ್ಥಿಗಳ ಗಮನಕ್ಕೆ ತರಲು ಹಾಗೂ ಸದರಿ ಅವಕಾಶವನ್ನು ಸದುಪಯೋಗ ಪಡೆದುಕೊಳ್ಳಲು ಸೂಚಿಸಲಾಗಿದೆ ಎಂದು ಮೌಲ್ಯಮಾಪನ ಕುಲಸಚಿವರಾದ ಪ್ರೊ.ಎಸ್.ಎಂ.ಹುರಕಡ್ಲಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.