ವಿದ್ವಾಂಸ ಬನ್ನಂಜೆ ಗೋವಿಂದಾಚಾರ್ಯ ಇನ್ನಿಲ್ಲ

ಉಡುಪಿ : ದೇಶದ ಪ್ರಮುಖ ವಿದ್ವಾಂಸರದಲ್ಲಿ ಒಬ್ಬರೆನಿಸಿಕೊಂಡಿದ್ದಂತ ಬನ್ನಂಜೆ ಗೋವಿಂದಾಚಾರ್ಯರು(84) ಇಂದು ನಿಧನರಾಗಿದ್ದಾರೆ.

ಅಂದಹಾಗೇ, ಉಡುಪಿ ಜಿಲ್ಲೆಯ ಅಂಬಲಪಾಡಿಯಲ್ಲಿ 1936ರಲ್ಲಿ ಜನಿಸಿದ್ದರು. ತಮ್ಮ ಪ್ರವಚನಗಳ ಮೂಲಕ ತತ್ವ ಪ್ರಚಾರ ಕೈಗೊಂಡಿದ್ದರು. ಮಾಧ್ವ ತತ್ವದಲ್ಲಿ ಅಮೋಘ ಪಾ೦ಡಿತ್ಯ ಸಾಧಿಸಿರುವ ಇವರು ಅನೇಕ ಕೃತಿಗಳನ್ನು ರಚಿಸಿದ್ದರು. ಕನ್ನಡ ಹಾಗೂ ಸಂಸ್ಕೃತ ಭಾಷೆಯಲ್ಲಿ ಅನೇಕ ಕೃತಿಗಳನ್ನು ರಚಿಸಿದ್ದಾರೆ. ಇಂತಹ ಉಡುಪಿ ಜಿಲ್ಲೆಯ ಡಾ. ಬನ್ನಂಜೆ ಗೋವಿಂದಾಚಾರ್ಯ(84) ಇಂದು ತಮ್ಮ ಸ್ವಗೃಹ ಅಂಬಲಪಾಡಿಯಲ್ಲಿ ಬೆಳಗ್ಗೆ 11 ಗಂಟೆಗೆ ನಿಧನರಾಗಿದ್ದಾರೆ.

ಬನ್ನಂಜೆ ಗೋವಿಂದಾಚಾರ್ಯ ಅವರ ಕೃತಿಗಳು

ಅನೇಕ ಸಂಸ್ಕೃತ ಕೃತಿಗಳನ್ನು ಕನ್ನಡಕ್ಕೆ ಅನುವಾದ ಮಾಡಿದ್ದಾರೆ.

 1. ಬಾಣಭಟ್ಟನ ಕಾದಂಬರಿ,
 2. ಕಾಳೀದಾಸನ ಶಾಕುಂತಲಾ,
 3. ಶೂದ್ರಕನ ‘ಮೃಚ್ಛಕಟಿಕ’ ಇತ್ಯಾದಿ ಚಾರಿತ್ರಿಕ ಕೃತಿಗಳು ಇವರ ಅನುವಾದಿತ ಕೃತಿಗಳಲ್ಲಿ ಪ್ರಮುಖವಾದುವು.
 4.  

ಟಿಪ್ಪಣಿಗಳನ್ನು ಬರೆದಿದ್ದಾರೆ

 1. ಶ್ರೀ ಶ್ರೀ ತ್ರಿವಿಕ್ರಮಾಚಾರ್ಯದಾಸರ ‘ಆನ೦ದಮಾಲಾ’,
 2. ತ್ರಿವಿಕ್ರಮ ಪ೦ಡಿತರ ‘ವಾಯುಸ್ತುತಿ’,
 3. ‘ವಿಷ್ಣುಸ್ತುತಿ’ ಇತ್ಯಾದಿ ಕೃತಿಗಳಿಗೆ ಟಿಪ್ಪಣಿಯನ್ನು ಬರೆದಿದ್ದಾರೆ.
 4. ಆರು ಉಪನಿಷತ್ತುಗಳಿಗೆ ಟೀಕೆಯನ್ನು ಬರೆದಿದ್ದಾರೆ.
 5. ಮಧ್ವಾಚಾರ್ಯರ ಮಹಾಭಾರತದ ತಾತ್ಪರ್ಯದ ಟೀಕಾ ಕೃತಿಯಾದ ‘ಯಮಕ ಭಾರತ’ ಕೃತಿಗೆ ಟಿಪ್ಪಣಿಯನ್ನು ಬರೆದಿದ್ದಾರೆ.
 6. ‘ಭಾಗವತ ತಾತ್ಪರ್ಯ’ ಕೃತಿಗೂ ಟಿಪ್ಪಣಿ ಬರೆದಿದ್ದಾರೆ.

ಕನ್ನಡಕ್ಕೆ ಅನುವಾದ

ಅನೇಕ ಸೂಕ್ತ ಮಂತ್ರಗಳನ್ನು ಕನ್ನಡದಲ್ಲಿ ರಚಿಸಿದ್ದಾರೆ.

 • ಪುರುಷಸೂಕ್ತ,
 • ಶ್ರೀ ಮದ್ಭಗವದ್ಗೀತೆ,
 • ಶ್ರೀ ಸೂಕ್ತ ,
 • ಶಿವಸೂಕ್ತ,
 • ನರಸಿಂಹ ಸ್ತುತಿ,
 • ತಂತ್ರಸಾರ ಸಂಗ್ರಹ ಇತ್ಯಾದಿಗಳನ್ನು ಕನ್ನಡೀಕರಿಸಿದ್ದಾರೆ.
 • ಮಧ್ವಾಚಾರ್ಯರ ‘ಮಾಧ್ವರಾಮಾಯಣ’,
 • ರಾಜರಾಜೇಶ್ವರಿ ಯತಿಗಳ ಮಂಗಲಾಷ್ಟಕ ಇತ್ಯಾದಿ ಕೃತಿಗಳನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ.

ಕನ್ನಡ ಚಲನಚಿತ್ರಗಳಿಗೆ ಸಂಭಾಷಣೆ

 1. ಜಿ.ವಿ. ಅಯ್ಯರ್ ಅವರ ಸಂಸ್ಕೃತ ಚಲನಚಿತ್ರ ‘ಶ್ರೀ ಶಂಕರಾಚಾರ್ಯ’, ‘ಶ್ರೀ ಮಧ್ವಾಚಾರ್ಯ’, ‘ಶ್ರೀ ರಾಮಾನುಜಾಚಾರ್ಯ’ ಚಲನಚಿತ್ರಗಳಿಗೆ ಸಂಪನ್ಮೂಲ ವ್ಯಕ್ತಿಯಾಗಿ ಕೆಲಸ ನಿರ್ವಹಿಸಿದ್ದಲ್ಲದೆ, ಸಂಭಾಷಣೆಯನ್ನು ರಚಿಸಿದ್ದಾರೆ.
 2. ಇವರು ಕನ್ನಡದ ಖ್ಯಾತ ನಟ ವಿಷ್ಣುವರ್ಧನರ ಆಧ್ಯಾತ್ಮಿಕ ಗುರುವಾಗಿದ್ದರು.

Leave a Reply

Your email address will not be published. Required fields are marked *

You cannot copy content of this page