ಬೆಳಗಾವಿ ಲೋಕಸಭೆ ಉಪಚುನಾವಣೆ: ಆಸಕ್ತಿ ಇಲ್ಲ ಎಂದ ಸತೀಶ ಜಾರಕಿಹೊಳಿ, ಚನ್ನರಾಜ ಹಟ್ಟಿಹೊಳಿಗೆ ಅವಕಾಶ ಸಾಧ್ಯತೆ

ಬೆಳಗಾವಿಬೆಳಗಾವಿ ಲೋಕಸಭಾ ಉಪಚುನಾವಣೆಗೆ ಸ್ಪರ್ಧಿಸಲು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ ನಿರಾಸಕ್ತಿ ವ್ಯಕ್ತಪಡಿಸಿದ್ದು, ಈ ಬೆಳವಣಿಗೆಯಿಂದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಸಹೋದರ ಚನ್ನರಾಜ ಹಟ್ಟಿಹೊಳಿಗೆ ಅವಕಾಶ ದೊರೆಯುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಇದರಿಂದ ಚನ್ನರಾಜ ಅವರಿಗೆ ಸಕ್ರಿಯ ರಾಜಕಾರಣಕ್ಕೆ ಧುಮುಕಲು ದೊಡ್ಡ ವೇದಿಕೆ ಸಿಕ್ಕಿದಂತಾಗುತ್ತದೆ.ನಗರದ ಕಾಂಗ್ರೆಸ್ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸತೀಶ, ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಕುರಿತು ಮುಂದಿನ ತಿಂಗಳಿನ ಮೊದಲ ವಾರದಲ್ಲಿ ಎರಡನೇ ಸುತ್ತಿನ ಸಭೆ ನಡೆಸಲಾಗುತ್ತದೆ. ಆ ವೇಳೆ ಅಭ್ಯರ್ಥಿ ಆಯ್ಕೆ ಮಾಡಲಾಗುವುದು ಎಂದರು.


ಕಾಂಗ್ರೆಸ್ ಪಕ್ಷದಲ್ಲಿ ಅಭ್ಯರ್ಥಿಗಳ ಕೊರತೆ ಇಲ್ಲ. ಮುಂದಿನ ದಿನಗಳಲ್ಲಿ ಸಭೆ ನಡೆಸಿ, ಮೂವರು ಅಭ್ಯರ್ಥಿಗಳ ಹೆಸರು ಶಿಪಾರಸ್ಸು ಮಾಡಬೇಕು. ಸಮರ್ಥ ಅಭ್ಯರ್ಥಿ ನೇಮಕ ಮಾಡಲಾಗುವುದೆಂದರು. ಇನ್ನು ಉಪಚುನಾವಣಗೆ ಸ್ಪರ್ಥಿಸುವ ವಿಚಾರವಾಗಿ ಮಾತನಾಡಿದ ಅವರು,  ವಯಕ್ತಿವಾಗಿ ಸ್ಪರ್ಧಿಸಲು ಆಸಕ್ತಿ ಇಲ್ಲ. ರಾಜ್ಯ, ಜಿಲ್ಲೆಯಲ್ಲಿಯೇ ಇನ್ನು ತುಂಬಾ ಕೆಲಸ ಮಾಡಬೇಕಾಗಿದೆ. ಆದರೆ  ಉಪಚುನಾವಣೆಗೆ ನನ್ನ ಹೆಸರು ಕೇಳಿ ಬಂದಿರುವುದು ನಿಜ ಎಂದು ಹೇಳಿದರು.

ಕರ್ನಾಟಕ ಬಂದ್ ಗೆ ಕಾಂಗ್ರೆಸ್ ಬೆಂಬಲ ಇಲ್ಲ. ಸಮುದಾಯ ಹಾಗೂ ನಿಗಮ ಮಂಡಳಗಳಿಗೆ ಪದಾಧಿಕಾರಿಗಳನ್ನು ನೇಮಕ ಮಾಡಿರುವುದರಕ್ಕೆ ವಿರೋಧ ಇಲ್ಲ. ಆದರೆ  ಅದನ್ನು ಬಜೆಟ್ ನಲ್ಲಿಯೇ ಘೋಷಣೆ ಮಾಡಬೇಕಿತ್ತು ಎಂದರು.

ಬೆಳಗಾವಿ ಜಿಲ್ಲೆ ವಿಭಜನೆಗೆ ಸಂಬಂಧಪಟ್ಟಂತೆ ಪ್ರತಿಕ್ರಿಯಿಸಿರುವ ಸತೀಶ, ಧಾರವಾಡದಲ್ಲಿಯೂ ಮೊದಲು 18 ವಿಧಾನಸಭಾ ಕ್ಷೇತ್ರಗಳಿದ್ದವು. ಆಗ  ಧಾರವಾಡ ಜಿಲ್ಲೆ ವಿಭಜನೆ ಮಾಡಲಾಗಿಯಿತು. ಅದೇ ರೀತಿ ಬೆಳಗಾವಿ ಜಿಲ್ಲೆಯನ್ನೂ ಸಹ ಗೋಕಾಕ್, ಚಿಕ್ಕೋಡಿ, ಬೆಳಗಾವಿ ಮೂರು ಜಿಲ್ಲೆಯಾಗಲೇ ಬೇಕು. ಈ ಬಗ್ಗೆ ಮೊದಲಿಂದಲೂ ಜಿಲ್ಲೆಯ ವಿಭಜನೆಗೆ ಒತ್ತಾಯಿಸುತ್ತಿದ್ದೇವೆ ಎಂದರು.ಬೆಳಗಾವಿ ಕಾಂಗ್ರೆಸ್ ಗ್ರಾಮೀಣ ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ, ನಗರಾಧ್ಯಕ್ಷ ರಾಜು ಸೇಠ್ ಇದ್ದರು.

Leave a Reply

Your email address will not be published. Required fields are marked *

You cannot copy content of this page