ಸೋನಿಯಾ ಗಾಂಧಿ ಆಪ್ತ ಅಹ್ಮದ ಪಟೇಲ್ ಇನ್ನಿಲ್ಲ

ನವದೆಹಲಿ: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಅಹ್ಮದ್ ಪಟೇಲ್ ವಿಧಿವಶರಾಗಿದ್ದಾರೆ. ದೆಹಲಿಯ ಮೇದಾಂತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪಟೇಲ್ ಅವರು ಬೆಳಗಿನ ಜಾವ 3.30 ರ ಸುಮಾರಿಗೆ ನಿಧನರಾಗಿದ್ದಾರೆ ಎಂದು ಅವರ ಪುತ್ರ ಮಾಹಿತಿ ನೀಡಿದ್ದಾರೆ.

ಒಂದು ತಿಂಗಳ ಹಿಂದೆ ಕೊರೋನಾ ಸೋಂಕಿಗೆ ತುತ್ತಾಗಿದ್ದ ಅವರು ಅನಾರೋಗ್ಯದ ಕಾರಣ ಮೇದಾಂತ ಆಸ್ಪತ್ರೆ ತೀವ್ರ ನಿಗಾಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ರಾಜಕೀಯ ಕಾರ್ಯದರ್ಶಿಯಾಗಿ ಅವರು ಕಾರ್ಯನಿರ್ವಹಿಸಿದ್ದಾರೆ. ಅವರ ನಿಧನಕ್ಕೆ ಕಾಂಗ್ರೆಸ್ ಪಕ್ಷದ ನಾಯಕರು ಸಂತಾಪ ಸೂಚಿಸಿದ್ದಾರೆ.

Leave a Reply

Your email address will not be published. Required fields are marked *

You cannot copy content of this page