
ಲೀನಾ ಟೋಪಣ್ಣವರ ಅವರಿಗೆ ಮಹತ್ವದ ಹುದ್ದೆ ನೀಡಿದ ರಾಜ್ಯ ಸರ್ಕಾರ
ಬೆಳಗಾವಿ: ದಶಕಗಳಿಂದ ಬಿಜೆಪಿಯಲ್ಲಿ ನಿಷ್ಠೆಯಿಂದ ಪಕ್ಷ ಸಂಘಟಿಸಿ ಬೆಳೆಸಿರುವ ಬೆಳಗಾವಿಯ ಪ್ರಾಮಾಣಿಕ ಕಾರ್ಯಕರ್ತೆ ಲೀನಾ ಟೋಪಣ್ಣವರ ಅವರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರಕಾರದಲ್ಲಿ ಮಹತ್ತರ ಹುದ್ದೆ ನೀಡಿ ಆದೇಶ ಹೊರಡಿಸಿದ್ದಾರೆ.
ಬೆಳಗಾವಿಯ ಮೂಲೆ ಮೂಲೆಯಲ್ಲಿ ಬಿಜೆಪಿಯನ್ನು ಬೇರು ಮಟ್ಟದಲ್ಲಿ ಸಂಘಟಿಸಿದ್ದ ಲೀನಾ ಅವರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಬಾಲಭವನ ಸೊಸೈಟಿಯ ನಿರ್ದೇಶಕರನ್ನಾಗಿ ರಾಜ್ಯ ಸರಕಾರ ನೇಮಕ ಮಾಡಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಲೀನಾ ಟೋಪಣ್ಣವರ ಪಕ್ಷದ ಸಾಮಾನ್ಯ ಕಾರ್ಯಕರ್ತೆಯಾಗಿ ನಾನು ಪ್ರಾಮಾಣಿಕವಾಗಿ ದುಡಿದ್ದೇನೆ. ನನ್ನ ಮೇಲೆ ವಿಶ್ವಾಸವಿಟ್ಟು ಸಿಎಂ ಬಿ.ಎಸ್.ಯಡಿಯೂರಪ್ಪನವರು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಬಾಲಭವನ ಸೊಸೈಟಿಯ ನಿರ್ದೇಶಕರನ್ನಾಗಿ ರಾಜ್ಯ ಸರಕಾರ ನೇಮಕ ಮಾಡಿ ಆದೇಶ ಮಾಡಿದ್ದಾರೆ. ಇನ್ನಷ್ಟು ಚುರುಕಾಗಿ ಕೆಲಸ ಮಾಡಿ ಸರಕಾರಕ್ಕೆ ಹಾಗೂ ಬೆಳಗಾವಿಗೆ ಹೆಸರು ತಂದು ಕೊಡುವ ಪ್ರಯತ್ನ ಮಾಡುತ್ತೇನೆ ಎಂದು ತಿಳಿಸಿದ್ದಾರೆ.