ಮುನಿರತ್ನಗೆ ಸುಪ್ರೀಂ ಕೋರ್ಟಿನಿಂದ ಬಿಗ್ ರಿಲೀಫ್

ಬೆಂಗಳೂರು:   ರಾಜರಾಜೇಶ್ವರಿನಗರ ಚುನಾವಣಾ ಅಕ್ರಮ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂಕೊರ್ಟ್, ತುಳಸಿ ಮುನಿರಾಜು ಗೌಡ ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಿದೆ. ಸದ್ಯ ಮುನಿರತ್ನ ಅವರಿಗೆ ಬಿಗ್ ರಿಲೀಪ್ ದೊರೆತಿದ್ದು, ಚುನಾವಣೆ ಸ್ಪರ್ಧಿಸುವ ಹಾದಿ ಸುಗಮವಾಗಿದೆ.

2018ರ ರಾಜರಾಜೇಶ್ವರಿ ನಗರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ನಕಲಿ ಮತದಾರರ ಪಟ್ಟಿ ದೊರೆತ ಹಿನ್ನೆಲೆ, ಮಾಜಿ ಶಾಸಕ ಮುನಿರತ್ನ ವಿರುದ್ಧ ಚುನಾವಣಾ ಅಕ್ರಮ ಆರೋಪ ಕೇಳಿ ಬಂದಿತ್ತು. ಈ ಸಂಬಂಧ ಪ್ರತಿಸ್ಪರ್ಧಿ ತುಳಸಿ ಮುನಿರಾಜುಗೌಡ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ರು.

ಈ ಕುರಿತು ಇಂದು ಸುಪ್ರಿಂಕೋರ್ಟ್​ ಮಹತ್ವದ ನಿರ್ಧಾರ ಕೈಗೊಂಡಿದ್ದು ತುಳಸಿ ಮುನಿರಾಜುಗೌಡ ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಿದೆ. ರಾಜರಾಜೇಶ್ವರಿನಗರದ ಟಿಕೆಟ್ ಆಕಾಂಕ್ಷಿಯಾಗಿರೋ ಮುನಿರತ್ನ ದಾರಿ ಸುಗಮವಾದಂತಾಗಿದೆ. 

Leave a Reply

Your email address will not be published. Required fields are marked *

You cannot copy content of this page