ಬೆಳಗಾವಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿಗೆ ಆಡಳಿತಾಧಿಕಾರಿಯಾಗಿ ವಿದ್ಯಾವತಿ ಬ್ಯಾಕೂಡ ನೇಮಕ

ಬೆಳಗಾವಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿಗೆ ಆಡಳಿತಾಧಿಕಾರಿಯಾಗಿ ವಿದ್ಯಾವತಿ ಬ್ಯಾಕೂಡ ನೇಮಕ

 

 

ಬೆಳಗಾವಿ: ಆಯಾ ಜಿಲ್ಲೆಗಳಲ್ಲಿನ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರನ್ನು ಸಪ್ಟೆಂಬರ್ 3 ರಿಂದ ಜಾರಿಗೆ ಬರುವಂತೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಆಡಳಿತಾಧಿಕಾರಿಯಾಗಿ ನೇಮಕ ಮಾಡಿ ಮತ್ತು ಮುಂದಿನ ಆದೇಶದ ವರೆಗೆ ಹೆಚ್ಚುವರಿ ಪ್ರಭಾರದಲ್ಲಿರಿಸಿ ಸರ್ಕಾರ ಆದೇಶ ಹೊರಡಿಸಿದೆ. ಅದರಂತೆ ಬೆಳಗಾವಿ ಜಿಲ್ಲೆಯಲ್ಲಿ ಪರಿಷತ್ತಿನ ಆಡಳಿತಾಧಿಕಾರಿಯಾಗಿ ಇಲಾಖೆಯ ಸಹಾಯಕ ನಿರ್ದೇಶಕಿ ವಿದ್ಯಾವತಿ ಬ್ಯಾಕೂಡ ಕಾರ್ಯಭಾರ ನೋಡಿಕೊಳ್ಳಲಿದ್ದಾರೆ.

 

 

ಸರ್ಕಾರವು ಸಪ್ಟೆಂಬರ್ 3ಕ್ಕೆ ಜಾರಿಗೆ ಬರುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕ ಎಸ್ ರಂಗಪ್ಪ ಅವರನ್ನು ಪರಿಷತ್ತಿನ ಆಡಳಿತಾಧಿಕಾರಿಯಾಗಿ ನೇಮಿಸಿದೆ. ಅದರಂತೆ ಜಿಲ್ಲಾ ಮಟ್ಟದಲ್ಲಿ ಆಯಾ ಸಹಾಯಕ ನಿರ್ದೇಶಕರನ್ನು ಆಡಳಿತಾಧಿಕಾರಿಯಾಗಿ ನೇಮಕ ಮಾಡಿ ಇಲಾಖೆಯ ನಿರ್ದೇಶಕರು ಆದೇಶ ಮಾಡಿದ್ದಾರೆ.